ರಾಜಕೀಯ ಭ್ರಷ್ಟಾಚಾರದ ಬಗ್ಗೆ ಚಿಂತೆ ಬೇಡ: ಅಧಿಕಾರಿಗಳಿಗೆ ಸಿಎಂ ಸಲಹೆ

ಗುರುವಾರ, 5 ಸೆಪ್ಟಂಬರ್ 2013 (14:23 IST)
PTI
ರಾಜಕೀಯದಲ್ಲಿ ಭ್ರಷ್ಟಾಚಾರ ಸರ್ವೇಸಾಮಾನ್ಯ. ರಾಜಕೀಯ ಭ್ರಷ್ಟಾಚಾರದ ಬಗ್ಗೆ ಅಧಿಕಾರಿಗಳು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿಕೆ ನೀಡಿದ ಆಂಧ್ರಪ್ರದೇಶದ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಭಂಢತನವನ್ನು ತೋರಿದ್ದಾರೆ.

ನಗರದಲ್ಲಿ ನಡೆದ ನಾಗರಿಕ ಸೇವಾ ಪ್ರೊಭೆಷನರಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ರೆಡ್ಡಿ, ರಾಜಕಾರಣಿಗಳಲ್ಲಿರುವ ಭ್ರಷ್ಟಾಚಾರದ ಹಣ ಚುನಾವಣೆ ಸಂದರ್ಭದಲ್ಲಿ ಮತ್ತೆ ಜನತೆಯತ್ತ ಮರಳಿ ಬರುವುದರಿಂದ ರಾಜಕೀಯ ಭ್ರಷ್ಟಾಚಾರದ ಬಗ್ಗೆ ಹೆಚ್ಚಿನ ಚಿಂತನೆ ಅಗತ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಮೈಕ್ ಹಿಡಿದು ತಮ್ಮ ಬ್ರೆಕ್‌ರಹಿತ ಭಾಷಣವನ್ನು ಮುಂದುವರಿಸಿದ ಅವರು, ರಾಜಕೀಯ ಭ್ರಷ್ಟಾಚಾರ ಹೆಚ್ಚಳಕ್ಕೆ ಪ್ರೋತ್ಸಾಹ ನೀಡಿ ಎಂದು ನಾನು ಹೇಳುತ್ತಿಲ್ಲ. ರಾಜಕೀಯದಲ್ಲಿ ಪ್ರಮಾಣಿಕತೆ ಇರಬೇಕು. ಇತರ ರೀತಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಎಚ್ಚರವಾಗಿರಬೇಕು. ಯಾಕೆಂದರೆ, ಆ ಹಣ ಜನತೆಗೆ ವಾಪಸ್ ಬರುವುದಿಲ್ಲ ಎಂದು ತಮ್ಮ ಜಾಣತನವನ್ನು ಮೆರೆದಿದ್ದಾರೆ.

ರಾಜಕೀಯ ಪಕ್ಷಗಳು ಮಾಹಿತಿ ಹಕ್ಕು ಕಾಯ್ದೆಯಿಂದ ಹೊರಬರಬೇಕು ಎನ್ನುವ ಪ್ರಯತ್ನ ನಡೆಸುತ್ತಿರುವಾಗಲೇ ಆಂಧ್ರ ಸಿಎಂ ಕಿರಣ್ ಕುಮಾರ್ ರೆಡ್ಡಿಯವರ ಹೇಳಿಕೆ ಮತ್ತಷ್ಟು ಪೂರಕವಾಗಿದೆ.

ವೆಬ್ದುನಿಯಾವನ್ನು ಓದಿ