ರಾಜಸ್ಥಾನ: ಪೊಲೀಸ್ ಅಧಿಕಾರಿಯಿಂದಲೇ ಯುವತಿಯ ಮೇಲೆ ಅತ್ಯಾಚಾರ

ಶನಿವಾರ, 5 ಏಪ್ರಿಲ್ 2014 (13:19 IST)
ಶ್ರೀಗಂಗಾನಗರ್ ಜಿಲ್ಲೆಯ 27 ವರ್ಷ ಯುವತಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಪೊಲೀಸ್ ಅಧಿಕಾರಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ತನ್ನ ಮೇಲೆ ಅತ್ಯಾಚಾರವೆಸಗಿದ ಇಬ್ಬರು ಆರೋಪಿಗಳ ವಿರುದ್ಧ ತನಿಖೆ ನಡೆಸುತ್ತಿದ್ದ ಪೊಲೀಸ್ ಅಧಿಕಾರಿ ಚುಗ್ ಸಿಂಗ್ ಸೋಧಾ, ತನ್ನ ಮೇಲೆಯೇ ಅತ್ಯಾಚಾರವೆಸಗಿದ್ದಾರೆ ಎಂದು ಯುವತಿ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಿದ್ದಾಳೆ.

ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ರಜೆ ಮೇಲೆ ತೆರಳಿದ ಪೊಲೀಸ್ ಅಧಿಕಾರಿಯ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪಕ್ ಶರ್ಮಾ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ