'ರಾಹುಲ್ ಪ್ರಧಾನಿ ಅಭ್ಯರ್ಥಿಯಾದರೆ ಕಾಂಗ್ರೆಸ್‌ಗೆ ಯಾವ ಲಾಭವೂ ಇಲ್ಲ'

ಮಂಗಳವಾರ, 31 ಡಿಸೆಂಬರ್ 2013 (18:52 IST)
PR
PR
ನವದೆಹಲಿ: ರಾಹುಲ್ ಗಾಂಧಿಯವರನ್ನು ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿದರೂ ಕೂಡ ಯಾವುದೇ ಲಾಭವಾಗುವುದಿಲ್ಲ ಎಂದು ಬಿಜೆಪಿ ತಿಳಿಸಿದೆ. ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದ ಬಿಜೆಪಿ ನಾಯಕ ಯಶವಂತ ಸಿನ್ಹಾ, ಕಾಂಗ್ರೆಸ್ ರಾಹುಲ್ ಗಾಂಧಿಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿದರೆ, ಅವರ ನಾಯಕತ್ವದಲ್ಲಿ ಪಕ್ಷ ಉತ್ತಮವಾಗಿ ಕಾರ್ಯನಿರ್ವಹಿಸುವ ಸಾಧ್ಯತೆಯಿಲ್ಲ ಎಂದು ಸಿನ್ಹಾ ಹೇಳಿದ್ದಾರೆ.ರಾಹುಲ್ ಗಾಂಧಿಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸುವ ಮೂಲಕ ಕಾಂಗ್ರೆಸ್ ಅನೇಕ ಸಮಸ್ಯೆಗಳನ್ನು ಎದುರಿಸಲಿದೆ. ಕಾಂಗ್ರೆಸ್ ಸರ್ಕಾರ ಈಗ ನಿಷ್ಕ್ರಿಯವಾಗಿದ್ದು, ಚುನಾವಣೆ ಆಯೋಗಕ್ಕೆ ಹೊಸದಾಗಿ ಚುನಾವಣೆ ಘೋಷಿಸುವುದು ರಾಷ್ಟ್ರದ ಮುಂದಿರುವ ಏಕಮಾತ್ರ ಆಯ್ಕೆಯಾಗಿದೆ ಎಂದು ಸಿನ್ಹಾ ಹೇಳಿದರು.

ಬಿಜೆಪಿ ಉಪಾಧ್ಯಕ್ಷ ಮುಖ್ತರ್ ಅಬ್ಬಾಸ್ ನಖ್ವಿ ಕೂಡ ಸಿನ್ಹಾ ಅಭಿಪ್ರಾಯವನ್ನು ಒಪ್ಪಿದರು. ಪ್ರಧಾನಿ ಕಣದಿಂದ ಹೊರಗುಳಿದು ರಾಹುಲ್‌ಗೆ ದಾರಿ ಕಲ್ಪಿಸುವುದರಿಂದ ಕಾಂಗ್ರೆಸ್‌ಗೆ ಯಾವ ಪ್ರಯೋಜನವೂ ಇಲ್ಲ ಎಂದು ನಖ್ವಿ ಹೇಳಿದರು.

ವೆಬ್ದುನಿಯಾವನ್ನು ಓದಿ