ರೆಸ್ಟುರಾಂಟ್‌ನಲ್ಲಿ ಕಾಲ್ ಸೆಂಟರ್ ಉದ್ಯೋಗಿಯ ಮೇಲೆ ಗ್ಯಾಂಗ್‌ರೇಪ್

ಮಂಗಳವಾರ, 1 ಏಪ್ರಿಲ್ 2014 (11:48 IST)
ವಾಣಿಜ್ಯ ನಗರಿಯಲ್ಲಿ ರೇಪ್ ಗ್ಯಾಂಗ್ ರೇಪ್ ಪ್ರಕರಣಗಳು ಎಗ್ಗಿಲ್ಲದೆ ನಡೆಯುತ್ತಿವೆ. ಇದೀಗ ಕಾಲ್‌ಸೆಂಟರ್ ಮಹಿಳಾ ಉದ್ಯೋಗಿಯನ್ನು ಮೇಲೆ ಗ್ಯಾಂಗ್‌ರೇಪ್ ಎಸಗಿದ ಘಟನೆ ವರದಿಯಾಗಿದೆ.

ನಗರದ ಪರ್ದೇಶಿಪುರಾ ಪ್ರದೇಶದಲ್ಲಿರುವ ರೆಸ್ಟುರಾಂಟ್‌ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ನಡೆದಿರುವುದು ಖಚಿತವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅತ್ಯಾಚಾರಕ್ಕೊಳಗಾದ ಯುವತಿ ಮೂವರು ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ ನಂತರ ಪೊಲೀಸರು ರೆಸ್ಟುರಾಂಟ್ ಮೇಲೆ ದಾಳಿ ನಡೆಸಿದ್ದಾರೆ. ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪೊಲೀಸರಿಗೆ ಆರೋಪಿಗಳ ಬಗ್ಗೆ ಮಾಹಿತಿ ಲಭಿಸಿದ್ದು, ಶೀಘ್ರದಲ್ಲಿಯೇ ಬಂಧಿಸಲಾಗುವುದು ಎಂದು ಪೊಲೀಸ್ ಅಧಿಕಾರಿ ಕಮಲ್ ಜೈನ್ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ