ಸೋನಿಯಾ ಗಾಂಧಿ ವಿರುದ್ಧ 10 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ: ಚೌಹಾನ್

ಸೋಮವಾರ, 18 ನವೆಂಬರ್ 2013 (13:36 IST)
PTI
ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ 10 ಕೋಟಿ ರೂಪಾಯಿಗಳ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಮಧ್ಯಪ್ರದೇಶದ ರಾಜ್ಯ ಕಾಂಗ್ರೆಸ್ ಅದ್ಯಕ್ಷ್ಯ ಕಾಂತಿಲಾಲ್ ಭೂರಿಯಾ ವಿರುದ್ಧವೂ ಚೌಹಾನ್ ಮಾನನಷ್ಟ ಮೂಕದ್ದಮೆಯಲ್ಲಿ ಆರೋಪಿಯಾಗಿಸಿದ್ದಾರೆ.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಕುಟುಂಬ ಭ್ರಷ್ಟಾಚಾರದಲ್ಲಿ ತೊಡಗಿದ್ದು ರಾಜ್ಯವನ್ನು ಲೂಟಿ ಹೊಡೆಯುತ್ತಿದೆ ಎಂದು ಕಾಂಗ್ರೆಸ್ ಪಕ್ಷ ಜಾಹೀರಾತು ಬಿಡುಗಡೆಗೊಳಿಸಿದ್ದರಿಂದ ಬಿಜೆಪಿ ಮುಖ್ಯಮಂತ್ರಿ ಚೌಹಾನ್ ಮಾನನಷ್ಟ ಮೊಕದ್ದಮೆ ನೋಟಿಸ್ ಜಾರಿ ಮಾಡಲಾಗಿದೆ.

ಮಧ್ಯಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಪರಸ್ಪರ ವಾಗ್ದಾಳಿ ನಡೆಸಿವೆ.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ರಾಜ್ಯದ ಅಭಿವೃದ್ಧಿ ಬಗ್ಗೆ ಕೇವಲ ಪೊಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕಳೆದ 10 ವರ್ಷಗಳ ಅವಧಿಯಲ್ಲಿ ಬಿಜೆಪಿ ಸರಕಾರದ ದುರಾಡಳಿತದಿಂದ ರಾಜ್ಯ ತುಂಬಾ ಹೀನಾಯ ಸ್ಥಿತಿಯಲ್ಲಿದೆ ಎಂದು ಕಾಂಗ್ರೆಸ್ ಮುಖಂಡ ಜ್ಯೋತೀರಾಧಿತ್ಯ ಸಿಂಧ್ಯ ಆರೋಪಿಸಿದ್ದಾರೆ.

ವೆಬ್ದುನಿಯಾವನ್ನು ಓದಿ