ಕೇಂದ್ರ ಸರ್ಕಾರದಿಂದ ರಾಜ್ಯ ನೆರೆ ಪರಿಹಾರಕ್ಕೆ 1,200 ಕೋಟಿ ರೂ. ಬಿಡುಗಡೆ

ಶನಿವಾರ, 5 ಅಕ್ಟೋಬರ್ 2019 (09:02 IST)
ನವದೆಹಲಿ : ಕೊನೆಗೂ ಜನರ ಆಕ್ರೋಶಕ್ಕೆ ಮಣಿದು ರಾಜ್ಯ ನೆರೆ ಪರಿಹಾರಕ್ಕೆ ಕೇಂದ್ರ ಸರ್ಕಾರ 1,200 ಕೋಟಿ ರೂ. ಮಧ್ಯಂತರ ಪರಿಹಾರವನ್ನು ಬಿಡುಗಡೆ ಮಾಡಿದೆ.
ನೆರೆ ಪರಿಹಾರ ಬಿಡುಗಡೆ ಮಾಡದ್ದಕ್ಕೆ ಜನರ ಆಕ್ರೋಶ ಹೆಚ್ಚಾದ ಹಿನ್ನಲೆಯಲ್ಲಿ ಸಚಿವರಾದ ಪ್ರಹ್ಲಾದ್ ಜೋಷಿ ಮತ್ತು ಸದಾನಂದ ಗೌಡ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಭೇಟಿ ಮಾಡಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು.


ಆದಕಾರಣ ಕೇಂದ್ರ ಸರ್ಕಾರವು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (ನ್‌ಡಿಆರ್‌ಎಫ್‌) ಕರ್ನಾಟಕಕ್ಕೆ 1,200 ಕೋಟಿ ರೂ. ಮತ್ತು ಬಿಹಾರಕ್ಕೆ 400 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ