11 ವರ್ಷದ ಬಾಲೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದ ಕಾಮುಕ

ಸೋಮವಾರ, 31 ಮಾರ್ಚ್ 2014 (18:55 IST)
ನಗರದ ಪಿಸಾವಾ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ 11 ವರ್ಷ ವಯಸ್ಸಿನ ಅಪ್ರಾಪ್ತ ಬಾಲೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿದ ದಾರುಣ ಘಟನೆ ವರದಿಯಾಗಿದೆ.

ಅಪ್ರಾಪ್ತ ಬಾಲಕಿ ನಿನ್ನೆ ರಾತ್ರಿಯಿಂದ ಕಾಣೆಯಾಗಿದ್ದಳು. ಇಂದು ಬೆಳಿಗ್ಗೆ ಹತ್ತಿರದಲ್ಲಿರುವ ಹೊಲದಲ್ಲಿ ಬಾಲಕಿಯ ಶವ ಪತ್ತೆಯಾಗಿದೆ.

ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ನಂತರ ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿ ಪಿಸಾವಾ ಸರ್ವೇಂದ್ರನಾಥ್ ಯಾದವ್ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ