ಭೂಷಣ್ ಪ್ರಶಸ್ತಿ ಸಮಾರಂಭದಲ್ಲಿ ಬಿಸಿಲಿನ ತಾಪಕ್ಕೆ 11 ಮಂದಿ ಸಾವು!

ಮಂಗಳವಾರ, 18 ಏಪ್ರಿಲ್ 2023 (07:41 IST)
ಮುಂಬೈ : ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಸಮಾರಂಭಕ್ಕೆ ಬಂದಿದ್ದ 11 ಮಂದಿ ಬಿಸಿಲಿನ ತಾಪಮಾನಕ್ಕೆ ಸಾವನ್ನಪ್ಪಿದ ಘಟನೆ ನಡೆದಿದೆ.
 
ನವಿ ಮುಂಬೈನಲ್ಲಿ ಸರ್ಕಾರದಿಂದ ಸಾಮಾಜಿಕ ಕಾರ್ಯಕರ್ತ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆದಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹಾಗೂ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಈ ಬಿಸಿಲಿನ ಝಳ ತಾಳಲಾರದೇ ಕಾರ್ಯಕ್ರಮದಲ್ಲಿ ನೆರೆದಿದ್ದ 11 ಮಂದಿ ಸಾವನ್ನಪ್ಪಿದ್ದು, 50 ಮಂದಿ ವಿವಿಧ ಆರೋಗ್ಯ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಗೆ ಸಂಬಂಧಿಸಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಆಸ್ಪತ್ರೆಗೆ ತೆರಳಿದ್ದು, ರೋಗಿಗಳಿಗೆ ಧೈರ್ಯ ತುಂಬಿದ್ದಾರೆ. ಈ ಬಗ್ಗೆ ಮಾತನಾಡಿ, ಘಟನೆಯು ದುರದೃಷ್ಟಕರವಾಗಿದ್ದು, ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರವನ್ನು ಘೋಷಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ