ದೇಶದಲ್ಲಿ ಕೊರೊನಾ ಜಿಗತ ಸೂಚನೆ: 1150 ಪಾಸಿಟಿವ್ ಪತ್ತೆ!
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1150 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ನಾಲ್ವರು ಸೋಂಕಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 11,558ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಒಂದು ದಿನದಲ್ಲಿ 754 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 4,25,08,788ಕ್ಕೆ ತಲುಪಿದೆ. ಒಟ್ಟಾರೆ ಸಾವಿನ ಸಂಖ್ಯೆ 5,21,751ಕ್ಕೆ ಏರಿಕೆಯಾಗಿದೆ.