ದೇಶದಲ್ಲಿ ಕಳೆದ 24 ಗಂಟೆಯಲ್ಲಿ 12899 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 15 ಮಂದಿ ಸಾವಿಗೀಡಾಗಿದ್ದಾರೆ.
ಕೇಂದ್ರ ಸರಕಾರ ಭಾನುವಾರ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 72,474ಕ್ಕೆ ಜಿಗಿತ ಕಂಡಿದೆ.
ಸುಮಾರು 4 ತಿಂಗಳ ನಂತರ ಇದೇ ಮೊದಲ ಬಾರಿಗೆ 13 ಸಾವಿರ ಸಮೀಪ ಸೋಂಕು ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿದೆ. ಇದರಿಂದ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 4,35 ಕೋಟಿಗೆ ಏರಿಕೆಯಾಗಿದೆ.