ಪೋಲಿಯೋ ಲಸಿಕೆ ಬದಲಿಗೆ ಮಕ್ಕಳಿಗೆ ಹ್ಯಾಂಡ್ ಸ್ಯಾನಿಟೈಸರ್ ನೀಡಿ ಯಡವಟ್ಟು

ಮಂಗಳವಾರ, 2 ಫೆಬ್ರವರಿ 2021 (11:16 IST)
ಮುಂಬೈ: ಮಹಾರಾಷ್ಟ್ರದಲ್ಲಿ 12 ಮಕ್ಕಳಿಗೆ ಪೋಲಿಯೋ ಲಸಿಕೆ ಬದಲಿಗೆ ಹ್ಯಾಂಡ್ ಸ್ಯಾನಿಟೈಸರ್ ನೀಡಿ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಯಡವಟ್ಟು ಮಾಡಿದ್ದಾರೆ.

 

ಒಂದರಿಂದ ಐದು ವರ್ಷದೊಳಗಿನ 12 ಮಕ್ಕಳಿಗೆ ಘಟಾಂಜಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಪೋಲಿಯೋ ಲಸಿಕೆ ಬದಲಿಗೆ ತಪ್ಪಾಗಿ ಹ್ಯಾಂಡ್ ಸ್ಯಾನಿಟೈಸರ್ ನೀಡಲಾಗಿದೆ. ಹ್ಯಾಂಡ್ ಸ್ಯಾನಿಟೈಸರ್ ಸೇವಿಸಿ ಅಸ್ವಸ್ಥರಾದ ಎಲ್ಲಾ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಯಡವಟ್ಟು ಮಾಡಿದ ಸಿಬ್ಬಂದಿಗಳ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ