5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ

ಶುಕ್ರವಾರ, 23 ನವೆಂಬರ್ 2018 (07:06 IST)
ಲಕ್ನೋ : 5 ವರ್ಷದ ಬಾಲಕಿಯ ಮೇಲೆ 12 ವರ್ಷದ ಬಾಲಕನೊಬ್ಬ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಷಹಜಾನ್‍ಪುರ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.


ಬಾಲಕಿ ಮನೆಯ ಮುಂದೆ ಆಟವಾಡುತ್ತಿದ್ದಾಗ ಅಲ್ಲೇ ಕುಳಿತು ನೋಡುತ್ತಿದ್ದ ಪಕ್ಕದ ಮನೆಯ ಬಾಲಕ ಆಕೆಯನ್ನು ಮನೆಯ ಒಳಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ ಅಲ್ಲಿಂದ ಪರಾರಿಯಾಗಿದ್ದಾನೆ.


ಈ  ಘಟನೆಯ ಸಂಬಂಧಿಸಿದಂತೆ ಬಾಲಕಿಯ ಪೋಷಕರು ಕಾಲನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದು, ಆರೋಪಿಯ ಬಂಧನಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ