ಬದೌನ್: ಮತ್ತೆ 14 ವರ್ಷದ ಅಪ್ರಾಪ್ತಳ ಮೇಲೆ ಮೂವರು ಯುವಕರಿಂದ ಗ್ಯಾಂಗ್‌ರೇಪ್

ಮಂಗಳವಾರ, 30 ಜೂನ್ 2015 (14:36 IST)
ನಗರದ ಸಿವಿಲ್ ಲೈನ್ ಪ್ರದೇಶದಲ್ಲಿ ಮೂವರು ಯುವಕರು 14 ವರ್ಷ ವಯಸ್ಸಿನ ಅಪ್ರಾಪ್ತಳ ಮೇಲೆ ಅತ್ಯಾಚಾರವೆಸಗಿದ ದಾರುಣ ಘಟನೆ ವರದಿಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಮೂವರು ಯುವಕರು ಅಪ್ರಾಪ್ತಳನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಗ್ಯಾಂಗ್‌ರೇಪ್ ಎಸಗಿ ಪ್ರಜ್ಞೆ ಕಳೆದುಕೊಂಡಿದ್ದ ಹದಿಹರೆಯದ ಬಾಲಕಿಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. 
 
ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಅತ್ಯಾಚಾರಕ್ಕೊಳಗಾದ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 
 
ಮತ್ತೊಬ್ಬ ಆರೋಪಿಯ ಪತ್ತೆಗೆ ಜಾಲ ಬೀಸಲಾಗಿದ್ದು ಶೀಘ್ರದಲ್ಲಿಯೇ ಆರೋಪಿಯನ್ನು ಬಂಧಿಸುವ ವಿಶ್ವಾಸವಿದೆ ಎಂದು ಪೊಲೀಸ್ ಮಹಾನಿರ್ದೇಶಕ ಆರ್‌ಕೆಎಸ್.ರಾಥೋಡ್ ತಿಳಿಸಿದ್ದಾರೆ.
 

ವೆಬ್ದುನಿಯಾವನ್ನು ಓದಿ