15 ದಿನಗಳೊಳಗಾಗಿ ಸಶಕ್ತ ಜನಲೋಕಪಾಲ್ ಮಸೂದೆ ಜಾರಿ: ಅರವಿಂದ್ ಕೇಜ್ರಿವಾಲ್

ಗುರುವಾರ, 26 ಡಿಸೆಂಬರ್ 2013 (15:21 IST)
PTI
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ 15 ದಿನಗಳೊಳಗಾಗಿ ಸಶಕ್ತ ಜನಲೋಕಪಾಲ್ ಮಸೂದೆಯನ್ನು ಜಾರಿಗೊಳಿಸುವುದಾಗಿ ಶನಿವಾರದಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ರಾಜ್ಯ ಸರಕಾರ ಲೋಕಪಾಲ ಮಸೂದೆ ಜಾರಿಗೆ ಬದ್ದವಾಗಿದೆ.ಕೆಲ ವಿಷಯಗಳನ್ನು ಹೊರತುಪಡಿಸಿ ಕೇಂದ್ರ ಸರಕಾರದ ವಿರುದ್ಧ ಕಾನೂನು ಉಲ್ಲಂಘಿಸುವಂತಹ ಯಾವುದೇ ಕಾನೂನು ಜಾರಿಗೊಳಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯ ಸರಕಾರ ಯಾವುದೇ ಕಾನೂನು ಜಾರಿಗೆ ತರುವ ಮುನ್ನ ಕೇಂದ್ರ ಸರಕಾರದ ಅನುಮತಿ ಪಡೆಯಬೇಕು ಎಂದು ಕೇಂದ್ರ ಸರಕಾರ ಕಾನೂನು ರೂಪಿಸಿದೆ. ಇಂತಹ ಕಾನೂನು ತುಂಬಾ ತಪ್ಪಿನಿಂದ ಕೂಡಿದೆ. ನಮ್ಮದು ಚುನಾಯಿತ ಸರಕಾರ ಕೇಂದ್ರದ ಕಾನೂನಿನ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಕೇಜ್ರಿವಾಲ್ ಗುಡುಗಿದ್ದಾರೆ.

ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಲು ಆಮ್ ಆದ್ಮಿ ಪಕ್ಷ ಬದ್ದವಾಗಿದೆ. ಕೇಂದ್ರದ ವಿರುದ್ಧ ಕೂಡಾ ಹೋರಾಡಲು ಸಿದ್ದ ಎಂದು ಭಾವಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ

ವೆಬ್ದುನಿಯಾವನ್ನು ಓದಿ