ರಾಜ್ಯದಲ್ಲಿ 150 ಸ್ಥಾನ ಗೆಲ್ಲುವುದು ನಮ್ಮ ಗುರಿ: ಸಿದ್ದರಾಮಯ್ಯ
ಸರ್ವೆ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್ 130 ಸ್ಥಾನ ಗೆಲ್ಲಲಿದೆ. ಆದರೆ ನಮ್ಮ ಗುರಿ 150 ಸ್ಥಾನ ಗೆಲ್ಲುವುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ದೆಹಲಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರ ಅಭಿಪ್ರಾಯದಲ್ಲಿ ನಾವು ಗೆಲ್ಲುತ್ತೇವೆ ಎನ್ನುವುದು ಇದೆ. ಇದನ್ನು ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ ಎಂದರು.
ನನಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಿದ್ದರಾಮತ್ಸೋವ ನಾಮು ಮಾಡುತ್ತಿಲ್ಲ. ಅಭಿಮಾನಿಗಳು ಮಾಡುತ್ತಿದ್ದಾರೆ. ದಾವಣಗೆರೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಬರುತ್ತೇನೆ ಎಂದು ಹೇಳಿದ್ದಾರೆ ಎಂದು ಅವರು ಹೇಳಿದರು.
ನಾನು ಸಾಮಾಜಿಕ ನ್ಯಾಯದ ಪರ. ಅಹಿಂದದಲ್ಲಿ ಬಲವಾದ ನಂಬಿಕೆ ಇಟ್ಟವನು. ಇದನ್ನು ಮುಂದುವರಿಸಿಕೊಂಡು ಹೊಗುತ್ತೇನೆ ಎಂದು ಅವರು ಸ್ಪಷ್ಟಪಡಿಸಿದರು.