16 ವರ್ಷದ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್‌ರೇಪ್ ಎಸಗಿ ವಿಡಿಯೋ ತೆಗೆದ ಕಾಮುಕರು

ಶನಿವಾರ, 5 ಏಪ್ರಿಲ್ 2014 (15:19 IST)
ಹತ್ತನೆ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯ ಮೇಲೆ 8 ಮಂದಿ ದುಷ್ಕರ್ಮಿಗಳು ಗ್ಯಾಂಗ್‌‍ರೇಪ್ ಎಸಗಿದ್ದು, ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವಿದ್ಯಾರ್ಥಿನಿ ಕೋಚಿಂಗ್ ಕ್ಲಾಸ್‌ಗಾಗಿ ಮನೆಯಿಂದ ತೆರಳುತ್ತಿರುವಾಗ ದಾರಿಯಲ್ಲಿ ಅಡ್ಡಗಟ್ಟಿದ 8 ಮಂದಿ ಆರೋಪಿಗಳು ಆಕೆಯನ್ನು ಒತ್ತಾಯಪೂರ್ವಕವಾಗಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಅತ್ಯಾಚಾರವೆಸಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಸೇನ್ ಟುಟಿ ತಿಳಿಸಿದ್ದಾರೆ.

ಆರೋಪಿಗಳು ನನ್ನ ಮೇಲೆ ಅತ್ಯಾಚಾರವೆಸಗಿದ್ದಲ್ಲದೇ ವಿಡಿಯೋ ತೆಗೆದು ಎಂಎಂಎಸ್ ಕ್ಲಿಪ್‌ಗಳನ್ನು ಮಾಡಿಕೊಂಡಿದ್ದಾರೆ ಎಂದು ಗ್ಯಾಂಗ್‌ರೇಪ್‌ಗೊಳಗಾದ ವಿದ್ಯಾರ್ಥಿನಿ ಆರೋಪಿಸಿದ್ದಾಳೆ.

ವೆಬ್ದುನಿಯಾವನ್ನು ಓದಿ