ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಕಸಿನ್ಸ್

ಶನಿವಾರ, 2 ಮೇ 2015 (17:57 IST)
16 ವರ್ಷದ ಪುಟ್ಟ ಬಾಲಕಿಯ ಮೇಲೆ ಆಕೆಯ ಸಂಬಂಧಿಕರೇ ಅತ್ಯಾಚಾರ ಮಾಡಿರುವ ಕರಾಳ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಎಪ್ರಿಲ್ 21 ರ ರಾತ್ರಿ ಈ ಘಟನೆ ನಡೆದಿದ್ದು, ಸಂಬಂಧದಲ್ಲಿ ಬಾಲಕಿಯ ಕಸಿನ್ಸ್ ಆಗಿರುವ ಆರಿಫ್ ಮತ್ತು ಶಹಜಾದ್ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ್ದಾರೆ. ಬಲೌನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿ ಧರ್ಮೇಂದ್ರ ಪನ್ವಾರ್ ತಿಳಿಸಿದ್ದಾರೆ, 
 
ಅಂದು ಆಕೆಯ ಪೋಷಕರು ಮದುವೆ ಕಾರ್ಯಕ್ರಮವೊಂದಕ್ಕೆ ಹೋಗಿದ್ದರು. ಮನೆಯಲ್ಲಿ ಒಬ್ಬಳೇ ಇದ್ದ ಬಾಲಕಿಯ ಬಲಿ ನಿನ್ನನ್ನು ನಾವು ಮದುವೆಗೆ ಕರೆದುಕೊಂಡು ಹೋಗುತ್ತೇವೆ ಎಂದು ನಂಬಿಸಿದ ಆರೋಪಿಗಳು ನಿರ್ಜನ ಪ್ರದೇಶವೊಂದಕ್ಕೆ ಆಕೆಯನ್ನು ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಮರುದಿನ  ಹಳ್ಳಿಯ ಹೊರವಲಯದಲ್ಲಿ ಬಾಲಕಿಯನ್ನು ಎಸೆದು ಆರೋಪಿಗಳು ಪರಾರಿಯಾಗಿದ್ದಾರೆ. 
 
ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿ ಈಗ ಸ್ವಲ್ಪ ಚೇತರಿಸಿಕೊಂಡಿದ್ದು ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. 
 
ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ವೆಬ್ದುನಿಯಾವನ್ನು ಓದಿ