1984 ರ ಸಿಖ್ ದಂಗೆ ಪ್ರಕರಣ; ದೆಹಲಿ ಹೈಕೋರ್ಟ್ ನಿಂದ ಮಹತ್ವದ ತೀರ್ಪು ಪ್ರಕಟ

ಸೋಮವಾರ, 17 ಡಿಸೆಂಬರ್ 2018 (14:46 IST)
ನವದೆಹಲಿ : 1984 ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂದಂಧಿಸಿದಂತೆ ದೆಹಲಿ ಹೈಕೋರ್ಟ್ ಮಹತ್ವದ ತೀರ್ಪುನ್ನು ಪ್ರಕಟಿಸಿದೆ.


ಈ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ದೋಷಿ ಎಂದು ಸಾಬೀತಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ 34 ವರ್ಷಗಳ ನಂತರ ಈ ಮಹತ್ವದ ತೀರ್ಪು ನೀಡಿದೆ.


1984 ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಅಪರಾಧಿ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಹಾಗೇ ಡಿಸೆಂಬರ್ 31ರೊಳಗೆ ಶರಣಾಗುವಂತೆ ಕೋರ್ಟ್ ಆದೇಶಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ