2,000 ರೂ. ಮುಖಬೆಲೆಯ ನೋಟುಗಳನ್ನ ಬ್ಯಾನ್ ಮಾಡಿ : ಸುಶೀಲ್

ಮಂಗಳವಾರ, 13 ಡಿಸೆಂಬರ್ 2022 (10:12 IST)
ನವದೆಹಲಿ : 2000 ರೂ. ಮುಖಬೆಲೆಯ ನೋಟುಗಳನ್ನು ಹಿಂಪಡೆಯುವಂತೆ ಬಿಜೆಪಿ ಸಂಸದ ಸುಶೀಲ್ ಮೋದಿ ಸಂಸತ್ತಿನಲ್ಲಿ ಆಗ್ರಹಿಸಿದ್ದರೆ.

ರಾಜ್ಯಸಭೆಯ ಶೂನ್ಯವೇಳೆಯಲ್ಲಿ ಮಾತನಾಡಿದ ಅವರು, 2000 ರೂ. ಮುಖಬೆಲೆಯ ನೋಟುಗಳು ದೇಶದ ಬಹುತೇಕ ಎಟಿಎಂಗಳಿಂದ ಕಣ್ಮರೆಯಾಗಿವೆ. ಸದ್ಯದಲ್ಲೇ ಅವು ಚಲಾವಣೆ ಕಳೆದುಕೊಳ್ಳಲಿವೆ ಎಂಬ ವದಂತಿಯೂ ಇದೆ ಎಂದು ಹೇಳಿದ್ದಾರೆ. 

ಭಾರತೀಯ ರಿಸರ್ವ್ ಬ್ಯಾಂಕ್ ಕಳೆದ 3 ವರ್ಷಗಳಿಂದ 2000 ರೂ. ಮುಖಬೆಲೆಯ ನೋಟುಗಳನ್ನು ಮುದ್ರಿಸೋದನ್ನೇ ನಿಲ್ಲಿಸಿದೆ. ಈ ನೋಟುಗಳು ಭಯೋತ್ಪಾದಕ ನಿಧಿ, ಮಾದಕವಸ್ತು ಕಳ್ಳಸಾಗಣೆ ಮತ್ತು ಕಪ್ಪುಹಣಕ್ಕೆ ಬಳಕೆಯಾಗುತ್ತಿದೆ ಎಂಬ ಮಾಹಿತಿ ಇದೆ. ಈ ಎಲ್ಲ ವಿಷಯಗಳ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ