2 ಸಾವಿರ ರೂ. ನೋಟುಗಳು ಬ್ಯಾಂಕಿಗೆ ವಾಪಸ್ ಆಗಿವೆ : ಆರ್‌ಬಿಐ

ಗುರುವಾರ, 3 ಆಗಸ್ಟ್ 2023 (13:02 IST)
ನವದೆಹಲಿ : ಚಲಾವಣೆಯಿಂದ 2,000 ರೂ. ಮುಖಬೆಲೆಯ ನೋಟುಗಳನ್ನು ಹಿಂಪಡೆಯುವುದಾಗಿ ಘೋಷಣೆ ಮಾಡಿದ ಬಳಿಕ ಇದುವರೆಗೆ ಸುಮಾರು 88% ರಷ್ಟು ಹಣ ಬ್ಯಾಂಕುಗಳಿಗೆ ವಾಪಸ್ಸಾಗಿವೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೇಳಿದೆ.
 
ಮೇ 19ರಂದು ಆರ್ಬಿಐ 2,000 ರೂ. ಮುಖಬೆಲೆಯ ನೋಟುಗಳನ್ನು ಹಿಂಪಡೆಯುವುದಾಗಿ ಘೋಷಣೆ ಮಾಡಿದ್ದು, ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿದೆ. ಜುಲೈ 31ರ ಬ್ಯಾಂಕ್ ವ್ಯವಹಾರ ಮುಕ್ತಾಯದ ವೇಳೆ 88% ರಷ್ಟು ನೋಟುಗಳನ್ನು ಹಿಂಪಡೆಯಲಾಗಿದೆ. ಇವುಗಳ ಪೈಕಿ 87% ರಷ್ಟು ನೋಟುಗಳು ಠೇವಣಿ ರೂಪದಲ್ಲಿ ಜಮೆಯಾಗಿದೆ ಎಂದು ತಿಳಿಸಿದೆ.

 
2016ರ ನವೆಂಬರ್ 8 ರಂದು 500 ಹಾಗೂ 1,000 ಮುಖಬೆಲೆಯ ನೋಟು ಅಮಾನ್ಯೀಕರಣದ ನಂತರ ಹೊಸದಾಗಿ 2,000 ರೂ. ನೋಟುಗಳನ್ನು ಪರಿಚಯಿಸಲಾಗಿತ್ತು. ಆದರೆ 2018ರಲ್ಲಿಯೇ 2,000 ರೂ. ನೋಟುಗಳ ಮುದ್ರಣವನ್ನು ಸ್ಥಗಿತಗೊಳಿಸಲಾಗಿತ್ತು. ಈ ಕುರಿತಾಗಿ ಸದನಕ್ಕೆ ಕೇಂದ್ರ ಸರ್ಕಾರ ಮಾಹಿತಿ ನೀಡಿತ್ತು.ಇದೀಗ ಕ್ಲೀನ್ ನೋಟ್ ಅಭಿಯಾನದಡಿ ನೋಟ್ಗಳನ್ನು ಹಿಂಪಡೆಯಲು ಆರ್ಬಿಐ ಮುಂದಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ