200 ರೂಪಾಯಿಗಾಗಿ ತಂದೆಯನ್ನೇ ಕೊಲೆ ಮಾಡಿದ ಅಪ್ರಾಪ್ತ ಮಗ

ಬುಧವಾರ, 16 ಜನವರಿ 2019 (07:51 IST)
ನವದೆಹಲಿ : 200 ರೂಪಾಯಿಗಾಗಿ ಅಪ್ರಾಪ್ತ ಮಗನೊಬ್ಬ ಜನ್ಮ ಕೊಟ್ಟ ತಂದೆಯನ್ನೇ ಕೊಲೆ ಮಾಡಿದ ಘಟನೆ ದೆಹಲಿಯ ನ್ಯೂ ಅಶೋಕ ನಗರ ಪ್ರದೇಶದಲ್ಲಿ ನಡೆದಿದೆ.

17 ವರ್ಷದ ಬಾಲಕ ಭಾನುವಾರ ರಾತ್ರಿ ತಂದೆಯ ಬಳಿ 200 ರೂ. ಹಣ ಕೊಡುವಂತೆ ಕೇಳಿದ್ದಾನೆ. ಇದಕ್ಕೆ ತಂದೆ ಒಪ್ಪದಿದ್ದಾಗ ಇಬ್ಬರ ನಡುವೆ ಜಗಳ ನಡೆದಿದ್ದು, ಕೋಪಗೊಂಡ ಮಗ ಚಾಕುವಿನಿಂದ ತಂದೆಯ ಎದೆಗೆ ಚುಚ್ಚಿದ್ದಾನೆ. ತಕ್ಷಣ ತಾಯಿ ಪತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಕೂಡ ಆಗಲೇ ತಂದೆ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

 

ಈ ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಬಂದು ಆರೋಪಿ ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ