ಪ್ರಧಾನಿ ಮೋದಿಯ ಮತ್ತೊಂದು ಭರವಸೆ: ಎಲ್ರಿಗೂ ಮನೆ ಕೊಡ್ತಾರಂತೆ
ಶನಿವಾರ, 23 ಸೆಪ್ಟಂಬರ್ 2017 (14:07 IST)
ಮುಂಬರುವ 2022ರ ವೇಳೆಗೆ ದೇಶದ ಪ್ರತಿಯೊಬ್ಬರಿಗೆ ಕೇಂದ್ರ ಸರಕಾರದಿಂದ ಮನೆ ಕೊಡುಗೆ ದೊರೆಯಲಿದೆ ಎಂದು ಪ್ರಧಾನಮಂತ್ರಿ ಮೋದಿ ಮತ್ತೊಂದು ಭರವಸೆ ನೀಡಿದ್ದಾರೆ.
ನಗರದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶಾದ್ಯಂತ ಕೋಟಿ ಕೋಟಿ ಮನೆಗಳನ್ನು ನಿರ್ಮಿಸುವ ಸರಕಾರದ ಯೋಜನೆಯಿಂದಾಗಿ ಲಕ್ಷಾಂತರ ಕಾರ್ಮಿಕರಿಗೆ ಉದ್ಯೋಗ ದೊರೆಯುವಂತಾಗಲಿದೆ ಎಂದು ತಿಳಿಸಿದ್ದಾರೆ.
"ನಮ್ಮ ರಾಜಕೀಯವು ಮತಗಳಿಕೆಗಾಗಿ ಅಲ್ಲ. ನಮ್ಮ ಸಂಸ್ಕೃತಿ ವಿಭಿನ್ನವಾಗಿದ್ದು, ಪಕ್ಷಕ್ಕಿಂತ ದೇಶವು ದೊಡ್ಡದು" ಎಂದ ಪ್ರಧಾನಿ ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು.
ನಮಗೆ ಪಕ್ಷಕ್ಕಿಂತ ದೇಶ ದೊಡ್ಡದು. ವಿಪಕ್ಷಗಳಂತೆ ವೋಟ್‌ಬ್ಯಾಂಕ್‌ಗಾಗಿ ರಾಜಕಾರಣ ಮಾಡುವುದಿಲ್ಲ. ದೇಶದ ಅಭಿವೃದ್ಧಿ ನಮ್ಮ ಮೂಲಮಂತ್ರವಾಗಿದೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.