ಆರೋಪಿ ದಿಲ್‌ಶಾದ್‌ನನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಅಪರಿಚಿತ ಆರೋಪಿಯ ಪತ್ತೆಗಾಗಿ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಅತ್ಯಾಚಾರಕ್ಕೊಳಗಾದ ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ತಿಳಿಸಿದ್ದಾರೆ.
ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ರೇಪ್‌ಗೊಳಗಾದ ಯುವತಿಯ ತಂದೆ, ಪತ್ನಿ ಮತ್ತು ಪುತ್ರಿ ಔಷಧಿ ತರಲು ಮೆಡಿಕಲ್ ಶಾಪ್‌ಗೆ ತೆರಳಿದ್ದಾಗ ಆರೋಪಿಗಳು ಇಬ್ಬರನ್ನು ಒತ್ತಾಯಪೂರ್ವಕವಾಗಿ ಕಬ್ಬಿನ ಹೊಲಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.