ಮೋದಿ ಪ್ರಶ್ನಿಸಿದ್ದ ಕೇಜ್ರಿವಾಲ್‌ಗೆ 25 ಸಾವಿರ ದಂಡ

ಶನಿವಾರ, 1 ಏಪ್ರಿಲ್ 2023 (08:40 IST)
ಅಹಮದಾಬಾದ್ : ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಮುಖಭಂಗ ಉಂಟಾಗಿದೆ. ಪ್ರಧಾನಿ ಮೋದಿ ಡಿಗ್ರಿ ಸರ್ಟಿಫಿಕೇಟ್ಗಳನ್ನು ಪ್ರದರ್ಶಿಸುವ ಅಗತ್ಯವಿಲ್ಲ ಎಂದು ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿ ಕೇಜ್ರಿವಾಲ್ಗೆ 25 ಸಾವಿರ ರೂ. ದಂಡವನ್ನೂ ವಿಧಿಸಿದೆ.

ಮೋದಿ ಅವರ ಪದವಿ ಮಾಹಿತಿಯನ್ನು ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡುವಂತೆ ಕೇಂದ್ರ ಮಾಹಿತಿ ಆಯೋಗ ಏಳು ವರ್ಷಗಳ ಹಿಂದಿನ ಆದೇಶವನ್ನು ಕೋರ್ಟ್ ರದ್ದುಗೊಳಿಸಿದೆ.

ಸಿಐಸಿ ಆದೇಶದ ವಿರುದ್ಧ ಗುಜರಾತ್ ವಿಶ್ವವಿದ್ಯಾಲಯದ ಮೇಲ್ಮನವಿಗೆ ಅನುಮತಿ ನೀಡಿದ ನ್ಯಾಯಮೂರ್ತಿ ಬಿರೇನ್ ವೈಷ್ಣವ್ ಅವರು ಕೇಜ್ರಿವಾಲ್ ಅವರಿಗೆ 25 ಸಾವಿರ ದಂಡ ವಿಧಿಸಿ 4 ವಾರಗಳಲ್ಲಿ ಮೊತ್ತವನ್ನು ಗುಜರಾತ್ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ (ಜಿಎಸ್ಎಲ್ಎಸ್ಎ) ಪಾವತಿಸುವಂತೆ ಸೂಚಿಸಿದ್ದಾರೆ.  

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ