ಆಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪನ: 280 ಮಂದಿ ಬಲಿ

ಬುಧವಾರ, 22 ಜೂನ್ 2022 (14:53 IST)

ಅಫ್ಘಾನಿಸ್ತಾನದ ಪೂರ್ವ ಪಕ್ಟಿಕಾ ಪ್ರಾಂತ್ಯದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 280 ಮಂದಿ ಸಾವನ್ನಪ್ಪಿದ್ದು, 250ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಪಕ್ಟಿಕಾ ಮತ್ತು ಖೋಸ್ಟ್ ಪ್ರಾಂತ್ಯಗಳಲ್ಲಿ ಸಂಭವಿಸಿದ ಭೂಕಂಪದಿಂದ ಹಲವಾರು ಮನೆಗಳು ಧ್ವಂಸಗೊಂಡಿದ್ದು, 28೦ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಯುಎಸ್ ಜಿಯೋಲಾಜಿಕಲ್ ಸರ್ವೆ (ಯುಎಸ್ಜಿಎಸ್) ಪ್ರಕಾರ, ಬುಧವಾರ ನಸುಕಿನ ವೇಳೆಯಲ್ಲಿ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಕೆಲವು ಭಾಗಗಳಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದೆ. ಆಗ್ನೇಯ ಅಫ್ಘಾನಿಸ್ತಾನದ ಖೋಸ್ಟ್ ನಗರದಿಂದ ಸುಮಾರು 44 ಕಿ.ಮೀ. (27 ಮೈಲುಗಳು) ದೂರದಲ್ಲಿ ಭೂಕಂಪ ಸಂಭವಿಸಿದೆ ಎಂದು ಯುಎಸ್ಜಿಎಸ್ ಹೇಳಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ