ಮಾಜಿ ಸಿಎಂ ರ್ಯಾಲಿ ವೇಳೆ ಕಾಲ್ತುಳಿತಕ್ಕೆ ಮತ್ತೆ 3 ಬಲಿ
ನಾಯ್ಡು ಅವರ ರ್ಯಾಲಿ ವೇಳೆ ಗುಂಟೂರು ಜಿಲ್ಲೆಯಲ್ಲಿ ಕಾಲ್ತುಳಿತಕ್ಕೆ ಮತ್ತೆ 3 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ 2024ರ ವಿಧಾನಸಭಾ ಚುನಾವಣೆಯ ತಯಾರಿಗಾಗಿ ರಾಜ್ಯಾದ್ಯಂತ ನಾಯ್ಡು ಅವರು ಸರಣಿ ರಾಜಕೀಯ ಸಭೆಗಳನ್ನು ನಡೆಸುತ್ತಿದ್ದಾರೆ.
ರ್ಯಾಲಿ ವೇಳೆ ಸಾವಿರಾರು ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಈ ವೇಳೆ ತಳ್ಳಾಟ-ನೂಕಾಟ ಜೋರಾಗಿತ್ತು. ಕಾಲ್ತುಳಿತದಿಂದಾಗಿ ಮೂವರು ಸಾವನ್ನಪ್ಪಿದ್ದಾರೆ.
ಗುಂಟೂರಿನಲ್ಲಾದ ಕಾಲ್ತುಳಿತ ದುರಂತದ ಬಗ್ಗೆ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಎಲ್ಲ ರೀತಿಯ ವೈದ್ಯಕೀಯ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಕ್ಕೆ ಸರ್ಕಾರದ ನೆರವಿನ ಭರವಸೆ ನೀಡಿದ್ದಾರೆ.