18 ವರ್ಷದ ಯುವತಿಯ ಮೇಲೆ ನಾಲ್ವರು ಕಾಮುಕರು ಮಾಡಿದ್ದೇನು ಗೊತ್ತೇ?

ಸೋಮವಾರ, 16 ಸೆಪ್ಟಂಬರ್ 2019 (12:03 IST)
ಪಾಟ್ನಾ :  4 ಮಂದಿ ಕಾಮುಕರು 18 ವರ್ಷದ ಯುವತಿಯನ್ನು ಅಪಹರಿಸಿ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿರುವ  ಘಟನೆ ಬಿಹಾರದಲ್ಲಿ ನಡೆದಿದೆ.




ಮುಜಾಫರ್‍ಪುರ ನಿರಾಶ್ರಿತ ಕೇಂದ್ರದಿಂದ ರಕ್ಷಿಸಲ್ಪಟ್ಟ ಯುವತಿ ತನ್ನ ಸಂಬಂಧಿಕರ ಮನೆಯಲ್ಲಿ ವಾಸಿಸುತ್ತಿದ್ದಳು. ಶುಕ್ರವಾರ ಸಂಜೆ ಯುವತಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ನಾಲ್ವರು ಕಾಮುಕರು ಮುಸುಕು ಧರಿಸಿ ಆಕೆಯನ್ನು ಕಾರಿನಲ್ಲಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿ ನಿರ್ಜನ ಪ್ರದೇಶದಲ್ಲಿ ಬಿಟ್ಟು ಹೋಗಿದ್ದಾರೆ.


ಈ ಘಟನೆಗೆ ಸಂಬಂಧಿಸಿದಂತೆ ಯುವತಿ ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಲು ತಂಡವನ್ನು ರಚಿಸಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ