ಮೋದಿ ಸರಕಾರದ 2ನೇ ವರ್ಷಾಚರಣೆ: ಉ.ಪ್ರದೇಶದಲ್ಲಿ ಬಿಜೆಪಿಯಿಂದ ವಿಕಾಸ್ ಪರ್ವ ಆಚರಣೆ

ಮಂಗಳವಾರ, 24 ಮೇ 2016 (10:30 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರ ಎರಡು ವರ್ಷಗಳ ಅವಧಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಬಿಜೆಪಿ ವಿಕಾಸ್ ಪರ್ವ ಕಾರ್ಯಕ್ರಮ ಆಯೋಜಿಸಿದ್ದು, ಕೇಂದ್ರ ಸರಕಾರ 45 ಸಚಿವರು ಉತ್ತರಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
 
ಕಳೆದ 2104ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಭಾರಿ ಜಯಗಳಿಸಿದ್ದ ಬಿಜೆಪಿ, ಇದೀಗ ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸುವ ನಿಟ್ಟಿನಲ್ಲಿ ರಣತಂತ್ರ ರೂಪಿಸುತ್ತಿದೆ ಎನ್ನಲಾಗಿದೆ.
 
ಬಿಜೆಪಿ ವಕ್ತಾರ ವಿಜಯ್ ಬಹದ್ದೂರ್ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರತಿಯೊಂದು ಜಿಲ್ಲಾ ಘಟಕ ಮೇ 24 ಮತ್ತು 25 ರಂದು ಸಿದ್ದತೆ ಬಗ್ಗೆ ಚರ್ಚೆ ನಡೆಸಲಿವೆ ಎಂದು ತಿಳಿಸಿದ್ದಾರೆ.
 
ಅರುಣ್ ಜೇಟ್ಲಿ, ಉಪೇಂದ್ರ ಖುಶ್ವಾ ಮತ್ತು ಉಪಾಧ್ಯಕ್ಷ ಪ್ರಕಾಶ್ ಝಾ ಲಕ್ನೋ ನಗರಕ್ಕೆ ಭೇಟಿ ನೀಡಲಿದ್ದರೆ, ಜೆಡಿ ನಡಡ್ಾ, ಬಂಡಾರೂ ದತ್ತಾತ್ರೇಯ, ಬೀರೇಂದ್ರ ಸಿಂಗ್, ಉತ್ತರಾಖಂಡ್ನ ಮಾಜಿ ಮುಖ್ಯಮಂತ್ರಿ ರಮೇಶ್ ಪೊಕ್ರಿಯಾಲ್ ಮತ್ತು ಅನುರಾಗ್ ಠಾಕೂರ್ ಬರೇಲಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
 
ಹರ್‍‌ಸಿಮ್ರತ್ ಕೌರ್, ಮನೋಜ್ ಸಿನ್ಹಾ ಮತ್ತು ಪೂನಮ್ ಮಹಾಜನ್ ಆಗ್ರಾ ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ. 
 
ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆದು ಸರಕಾರ ರಚಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸುವುದು ಖಚಿತ ಎಂದು ಬಿಜೆಪಿ ವಕ್ತಾರ ವಿಜಯ್ ಬಹದ್ದೂರ್ ತಿಳಿಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ