49 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ?

ಶುಕ್ರವಾರ, 3 ಏಪ್ರಿಲ್ 2015 (09:23 IST)
ಜವಾಹರ ನವೋದಯ ವಿದ್ಯಾಲಯದಲ್ಲಿ ಓದುತ್ತಿರುವ 49 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಶೋಷಣೆ ನಡೆದಿದ್ದು ಈ ಕುರಿತು ಶಾಲೆಯ ಪ್ರಾಚಾರ್ಯರೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಹಾರಾಷ್ಟ್ರದ ಅಕೋಲಾದಲ್ಲಿ ಘಟನೆ ನಡೆದಿದೆ.

ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರದ ಅಧ್ಯಾಪಕರಾಗಿರುವ ರಾಜನ್ ಗಾಜ್‌ಬಿಯೆ ಮತ್ತು ಶೈಲೇಶ್ ರಾಮ್‌ಟೆಕೆ ತಮಗೆ ನಿರಂತರವಾಗಿ ಲೈಂಗಿಕ ಹಿಂಸೆ ನೀಡುತ್ತಿದ್ದಾರೆ. ಪ್ರತಿರೋಧಿಸಿದರೆ  ಪ್ರಯೋಗ ಪರೀಕ್ಷೆಗಳಲ್ಲಿ ಅಂಕ ನೀಡುವುದಿಲ್ಲ ಎಂದು ಬೆದರಿಕೆ ಒಡ್ಡುತ್ತಾರೆ ಎಂದು ರಾಜ್ಯ ಮಹಿಳಾ ಆಯೋಗಕ್ಕೆ ಕೂಡ ವಿದ್ಯಾರ್ಥಿನಿಯರು ದೂರು ಸಲ್ಲಿಸಿದ್ದಾರೆ. 
 
ಶಿಕ್ಷಕರು ಲೈಂಗಿಕ ಪ್ರಚೋದಕ ವರ್ತನೆ, ಮಾತು, ಸನ್ನೆಗಳನ್ನು ಮಾಡುತ್ತಿದ್ದರು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. 
 
ಕೇಸ್ ದಾಖಲಾಗಿದ್ದಾಗಿನಿಂದ ಇಬ್ಬರು ಆರೋಪಿಗಳು ನಾಪತ್ತೆಯಾಗಿದ್ದಾರೆ.
 
ಆದರೆ ಕೆಲವು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿರುವ ಅವರು ತಾವು ಶಾಲೆಯಲ್ಲಿನ ಕೆಲವು ಸಮಸ್ಯಗಳ ವಿರುದ್ಧ ಧ್ವನಿ ಎತ್ತಿದ್ದರಿಂದ ನಮ್ಮ ಮೇಲೆ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.  

ವೆಬ್ದುನಿಯಾವನ್ನು ಓದಿ