5 ದಿನಗಳಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾದ ಟೆಕ್ಕಿ ಸಿಕ್ಕಿ ಬಿದ್ದಿದ್ದು ಹೇಗೆ?

ಸೋಮವಾರ, 21 ಡಿಸೆಂಬರ್ 2020 (07:10 IST)
ಖಾಂಡ್ವ : 26 ವರ್ಷದ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬ 5 ದಿನಗಳಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾಗಿ ಪರಾರಿಯಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಆರೋಪಿ ಖಾಂಡ್ವದಲ್ಲಿ ಮಹಿಳೆಯೊಬ್ಬಳನ್ನು ಮದುವೆಯಾಗಿ ಬಳಿಕ 5ದಿನ ಬಿಟ್ಟು ಇಂದೋರ್ ನಲ್ಲಿ ಮತ್ತೊಬ್ಬ ಮಹಿಳೆಯನ್ನು ಮದುವೆಯಾಗಿದ್ದಾರೆ. ಇಂದೋರ್ ನ ಮದುವೆಗೆ ಹೋದ ಖಾಂಡ್ವಾ ಸಂತ್ರಸ್ತೆಯ ಸಂಬಂಧಿಯೊಬ್ಬರು ಫೋಟೊ ತೆಗೆದು ಖಂಡ್ವಾ ಸಂತ್ರಸ್ತೆಗೆ ಕಳುಹಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಈ ಬಗ್ಗೆ ಎರಡು ಕುಟುಂಬದವರು ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಆರೋಪಿ ಪರಾರಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ