ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರಗೈದು ವಿಡಿಯೋ ಮಾಡಿದ ಕಾಮುಕರು

ಬುಧವಾರ, 21 ನವೆಂಬರ್ 2018 (06:56 IST)
ಪಾಟ್ನಾ : ಐವರು ಕಾಮುಕರು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಅದನ್ನು ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡುತ್ತಿದ್ದ ಘಟನೆ ಬಿಹಾರದ ನವಾಡ ಜಿಲ್ಲೆಯ ನಾರತ್ ಗ್ರಾಮದಲ್ಲಿ ನಡೆದಿದೆ.


ಘಟನೆ ಸುಮಾ ರು 3 ತಿಂಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯುವತಿಯು ಕೋಚಿಂಗ್ ತರಬೇತಿಗೆ ಹೋಗುವಾಗ ಐದು ಜನ ಕಾಮುಕರ ಗುಂಪೊಂದು ಆಕೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಅದನ್ನು ವಿಡಿಯೋ ಮಾಡಿ ಆಕೆಯ ಮೇಲೆ ಹಲ್ಲೆ  ಮಾಡಿದ್ದಾರೆ.


ಈ ಘಟನೆಗೆ ಸಂಬಂಧಿಸಿದಂತೆ ಯುವತಿ ಕುಟುಂಬಸ್ಥರು ಆರೋಪಿಗಳ ವಿರುದ್ಧ  ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಈ ಘಟನೆಗೆ ಸಂಬಂಧಪಟ್ಟ ರಾಹುಲ್ ಕುಮಾರ್, ರಮೇಶ್ ವಿಶ್ವಕರ್ಮ ಮತ್ತು ಅಂಕಿತ್ ಕುಮಾರ್ ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದು ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ