ಉರಿಯುವ ಬಿಸಿಲಿಗೆ 54 ಮಂದಿ ಬಲಿ, 400ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

ಭಾನುವಾರ, 18 ಜೂನ್ 2023 (14:14 IST)
ಲಕ್ನೋ : ಒಂದೆಡೆ ಚಂಡಮಾರುತಕ್ಕೆ ಸಿಕ್ಕಿ ಜನ ನಲುಗುತ್ತಿದ್ದರೆ, ಮತ್ತೊಂದೆಡೆ ಬಿಸಿಲಿನ ತಾಪಮಾನಕ್ಕೆ ಬಲಿಯಾಗುತ್ತಿದ್ದಾರೆ. ಕಳೆದ ಮೂರು ದಿನಗಳಲ್ಲಿ ಬಿಸಿಲಿನ ತಾಪಕ್ಕೆ ಉತ್ತರ ಪ್ರದೇಶದಲ್ಲಿ 54 ಮಂದಿ ಸಾವನ್ನಪ್ಪಿದ್ದು, 400ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಹಾರದಲ್ಲಿ 44 ಮಂದಿ ಬಲಿಯಾಗಿದ್ದಾರೆ.
 
ಸಾವಿಗೆ ಬೇರೆ ಬೇರೆ ಕಾರಣವಿದ್ದರೂ ಬಿಸಿಲಿನ ತಾಪಮಾನ ಏರಿಕೆ ಪ್ರಮುಖ ಕಾರಣವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ತೀವ್ರ ಶಾಖದಿಂದಾಗಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚುತ್ತಿದೆ. ಅನೇಕ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ಗಿಂತಲೂ ಅಧಿಕ ತಾಪಮಾನ ದಾಖಲಾಗುತ್ತಿದೆ. 

ಏಕಾ ಏಕಿ ಮರಣ ಪ್ರಮಾಣ ಹೆಚ್ಚಾಗಿದ್ದು, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯೂ ಹೆಚ್ಚಾಗಿದೆ. ಸಾರ್ವಜನಿಕರಲ್ಲಿ ಜ್ವರ, ಉಸಿರಾಟ ಸಮಸ್ಯೆ ಹಾಗೂ ಇತರ ಆರೋಗ್ಯ ಸಮಸ್ಯೆಗಳು ಕಂಡುಬರುತ್ತಿದ್ದು, ಆಸ್ಪತ್ರೆಗಳಲ್ಲಿ ತೀವ್ರ ನಿಗಾ ವಹಿಸಲಾಗಿದೆ.

ಜೂನ್ 15 ರಂದು ಉತ್ತರ ಪ್ರದೇಶದಲ್ಲಿ 23 ಮಂದಿ ಮೃತಪಟ್ಟಿದ್ದರು. ಜೂನ್ 16 ರಂದು 20 ಮಂದಿ ಹಾಗೂ ಜೂನ್ 17 ರಂದು 11 ಮಂದಿ ಮೃತಪಟ್ಟಿದ್ದಾರೆ ಎಂದು ಬಲ್ಲಿಯಾ ಆಸ್ಪತ್ರೆ ವೈದ್ಯ ಎಸ್.ಕೆ ಯಾದವ್ ತಿಳಿಸಿದ್ದಾರೆ. ಇದೇ ಸಮಯದಲ್ಲಿ ಬಿಹಾರದಲ್ಲೂ ಬಿಸಿಲಿನ ತಾಪಕ್ಕೆ 44 ಮಂದಿ ಬಲಿಯಾಗಿರುವುದು ಕಂಡುಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ