ಭಾರತದಲ್ಲಿ 5G ಸೇವೆ

ಭಾನುವಾರ, 6 ಫೆಬ್ರವರಿ 2022 (12:49 IST)
ನವದೆಹಲಿ : 5G ಸೇವೆ  ಪ್ರಸ್ತುತ ವಿಶ್ವದಲ್ಲಿ ಕೇವಲ 60 ದೇಶಗಳಲ್ಲಿ ಲಭ್ಯವಿದ್ದು, ಈ ಪಟ್ಟಿಗೆ ಶೀಘ್ರವೇ ಭಾರತವೂ ಸೇರ್ಪಡೆಯಾಗಲಿದೆ.

2022-23 ರ ವೇಳೆಗೆ ಭಾರತದಲ್ಲಿ 5G ಸೇವೆ ಆರಂಭಿಸಲಾಗವುದು ಎಂದು ವಿತ್ತ ಸಚಿವೆ ನಿರ್ಮಾಲಾ ಸೀತಾರಾಮನ್ ಮಂಗಳವಾರ ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ತಿಳಿಸಿದ್ದಾರೆ. ಖಾಸಗಿ ಟೆಲಿಕಾಂ ಕಂಪನಿಗಳಿಂದ 5G ಮೊಬೈಲ್ ಸೇವೆಗಳನ್ನು ನೀಡಲು ಅನುಕೂಲವಾಗುವಂತೆ, ಅಗತ್ಯವಿರುವ ಸ್ಪೆಕ್ಟ್ರಮ್ ಹರಾಜುಗಳನ್ನು  2022ರಲ್ಲೇ ನಡೆಸಲಾಗುವುದು ಎಂದು ಸೀತಾರಾಮನ್ ತಿಳಿಸಿದ್ದಾರೆ.

ಈ ಮೂಲಕ ಭಾರತದಲ್ಲಿ 4G ಗಿಂತ ನೂರು ಪಟ್ಟು ವೇಗದ ಇಂಟರ್ನೆಟ್  ಶೀಘ್ರದಲ್ಲೇ ಲಭ್ಯವಾಗಲಿದೆ. ಸಿಲಿಕಾನ್ ಸಿಟಿ ಬೆಂಗಳೂರು, ಮುಂಬೈ, ದೆಹಲಿ, ಅಹಮದಾಬಾದ್ ಸೇರಿದಂತೆ ಮಹಾ ನಗರಗಳಲ್ಲಿ ಮುಂದಿನ ವರ್ಷದಿಂದಲೇ ಅತೀ ವೇಗದ ಇಂಟರ್ನೆಟ್ ಸೇವೆ 5G ಸೇವೆ ಲಭ್ಯವಾಗಲಿದೆ ಎಂದು ದೂರಸಂಪರ್ಕ ಇಲಾಖೆ ತಿಳಿಸಿತ್ತು.

ಈ ಬೆನ್ನಲ್ಲೇ 5G ಸ್ಪೆಕ್ಟ್ರಂ ತರಂಗಾಂತರ ಹಂಚಿಕೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಅಲ್ಲದೇ . 5G ಸಂಬಂಧಿತ ವಸ್ತುಗಳ ಉತ್ಪಾದನೆಗೆ ಹಾಗೂ ಮೂಲಸೌಕರ್ಯ ನಿರ್ಮಾಣಕ್ಕೆ ಪ್ರೋತ್ಸಾಹ ಧನ ನೀಡಲಾಗುವುದು ಎಂದು ವಿತ್ತ ಸಚಿವೆ ತಿಳಿಸಿದ್ದಾರೆ.

ದೇಶದ ಪ್ರತಿ ಮೂಲೆಗೂ ಇಂಟರ್ನೆಟ್ ಸೇವೆ ಒದಗಿಸಲು ನಿಟ್ಟಿನಲ್ಲಿ ಆಪ್ಟಿಕಲ್ ಫೈಬರ್ ಮೂಲಕ ಗ್ರಾಮೀಣ ಪ್ರದೇಶಗಳಿಗೆ ಬ್ರಾಡ್ಬ್ಯಾಂಡ್, ಇಂಟರ್ ನೆಟ್ ಸೇವೆ ನೀಡಲಾಗುವುದು. 2025ರೊಳಗೆ ಪ್ರತಿ ಗ್ರಾಮಕ್ಕೂ ಇಂಟರ್ನೆಟ್ ನೀಡುವ ಗುರಿಯೊಂದಿಗೆ ಯೋಜನೆ ಸಿದ್ಧಪಡಿಸಲಾಗುವುದು ಎಂದು ಸೀತಾರಾಮನ್ ತಿಳಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ