ಪಂಚರಾಜ್ಯ ಚುನಾವಣೆಯ ಭಾಗವಾಗಿ ಶನಿವಾರ ರಾಜಸ್ಥಾನದ 199 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಶೇ.69ರಷ್ಟು ಮತದಾನವಾಗಿದೆ. ಕೆಲವೊಂದು ಸಣ್ಣಪುಟ್ಟ ಗಲಾಟೆ ಹೊರತುಪಡಿಸಿದರೆ ಮತದಾನ ಬಹುತೇಕ ಶಾಂತಿಯುತವಾಗಿತ್ತು. 200 ಕ್ಷೇತ್ರಗಳ ಪೈಕಿ 1ರಲ್ಲಿ ಅಭ್ಯರ್ಥಿಯೊಬ್ಬ ನಿಧನ ಹೊಂದಿದ ಕಾರಣ 199ರಲ್ಲಿ ಮತದಾನ ನಡೆಯಿತು. 1862 ಅಭ್ಯರ್ಥಿಗಳು ಕಣದಲ್ಲಿದ್ದು, ಡಿ.3ರಂದು ಇವರೆಲ್ಲರ ಭವಿಷ್ಯ ನಿರ್ಧಾರವಾಗಲಿದೆ.
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ವಿಧಾನಸಭಾ ಸ್ಪೀಕರ್ ಸಿ.ಪಿ.ಜೋಶಿ, ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಸೇರಿ ಅನೇಕರು ಉತ್ಸಾಹದಿಂದ ಮತ ಚಲಾಯಿಸಿದರು. ರಾಜ್ಯದಲ್ಲಿ ಸುಮಾರು 51 ಸಾವಿರ ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದ್ದು, ಮುಂಜಾನೆ 7 ಗಂಟೆಯಿಂದಲೇ ಜನ ಸರತಿಯಲ್ಲಿ ನಿಂತು ಮತ ಚಲಾಯಿಸಿದ್ದಾರೆ. ಸುಗಮ ಮತದಾನಕ್ಕಾಗಿ ರಾಜ್ಯಾದ್ಯಂತ 1.7 ಲಕ್ಷ ಸಿಬ್ಬಂದಿಯನ್ನು ನೇಮಕ ಮಾಡಲಾಗಿತ್ತು.