ಕರ್ನಾಟಕದ ರೈಲ್ವೆ ಯೋಜನೆಗಳಿಗೆ 7,000 ಕೋಟಿ ಅನುದಾನ ಹಂಚಿಕೆ: ಪ್ರಧಾನಿ ನರೇಂದ್ರ ಮೋದಿ

Sampriya

ಭಾನುವಾರ, 1 ಸೆಪ್ಟಂಬರ್ 2024 (12:03 IST)
ನವದೆಹಲಿ: ರೈಲ್ವೆ ಬಜೆಟ್‌ನಲ್ಲಿ ಕರ್ನಾಟಕ ರಾಜ್ಯದ ರೈಲು ಸಂಬಂಧಿತ ಯೋಜನೆಗಳಿಗೆ ₹ 7,000 ಕೋಟಿ ರೂ.ಗಿಂತ ಹೆಚ್ಚಿನ ಅನುದಾನ ನಿಗದಿಪಡಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಈ ವರ್ಷದ ಬಜೆಟ್‌ನಲ್ಲಿ ಕರ್ನಾಟಕಕ್ಕೆ 7,000 ಕೋಟಿ ರೂ.ಗಿಂತ ಹೆಚ್ಚಿನ ಹಣ ನಿಗದಿಪಡಿಸಲಾಗಿದೆ. 2014 ಕ್ಕೆ ಹೋಲಿಸಿದರೆ 9 ಪಟ್ಟು ಹೆಚ್ಚಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಅಲ್ಲದೇ, ಒಟ್ಟು 8 ವಂದೇ ಭಾರತ್‌ ರೈಲುಗಳು ಕರ್ನಾಟಕವನ್ನು ಸಂಪರ್ಕಿಸಿವೆ ಎಂದು ಮೂರು ಹೊಸ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಉದ್ಘಾಟನೆ ವೇಳೆ ಮಾತನಾಡಿದರು.

ಈ ವರ್ಷ ತಮಿಳುನಾಡಿನ ರೈಲು ಬಜೆಟ್‌ಗೆ ₹ 6,000 ಕೋಟಿ ಹೆಚ್ಚು ಅನುದಾನವನ್ನು ಮೀಸಲಿಡಲಾಗಿದೆ. ಇದು 2014 ಕ್ಕಿಂತ ಏಳು ಪಟ್ಟು ಹೆಚ್ಚು. ಈಗ ನೂತನ ವಂದೇ ಭಾರತ್‌ ರೈಲಿನಿಂದಾಗಿ ತಮಿಳುನಾಡಿನಲ್ಲಿ ಒಟ್ಟು ವಂದೇ ಭಾರತ್ ರೈಲುಗಳ ಸಂಖ್ಯೆ ಎಂಟಕ್ಕೆ ಏರಲಿದೆ ಎಂದು ತಿಳಿಸಿದ್ದಾರೆ.

ಪ್ರತಿ ಮಾರ್ಗದಲ್ಲಿ ವಂದೇ ಭಾರತ್‌ಗೆ ಬೇಡಿಕೆ ಹೆಚ್ಚಾಗಿದೆ. ಸೆಮಿ ಹೈಸ್ಪೀಡ್ ರೈಲುಗಳ ಆಗಮನವು ಜನರಲ್ಲಿ ತಮ್ಮ ವ್ಯಾಪಾರ, ಉದ್ಯೋಗ ಮತ್ತು ಅವರ ಕನಸುಗಳನ್ನು ವಿಸ್ತರಿಸಲು ವಿಶ್ವಾಸವನ್ನು ತುಂಬಿದೆ. ದೇಶಾದ್ಯಂತ 102 ವಂದೇ ಭಾರತ್ ರೈಲು ಸೇವೆಗಳು ಕಾರ್ಯನಿರ್ವಹಿಸುತ್ತಿವೆ. ಇದುವರೆಗೆ 3 ಕೋಟಿಗೂ ಹೆಚ್ಚು ಜನರು ಈ ರೈಲುಗಳಲ್ಲಿ ಪ್ರಯಾಣಿಸಿದ್ದಾರೆ ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ