ಕೋಲ್ಕತ್ತಾ : ಅಕ್ರಮ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ ಘಟನೆ ಪಶ್ಚಿಮ ಬಂಗಾಳದ ದತ್ತಪುಕೂರ್ನ ನಡೆದಿದೆ.
ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಅಲ್ಲದೇ ಸ್ಫೋಟದ ತೀವ್ರತೆಗೆ ಈ ಪ್ರದೇಶದಲ್ಲಿನ ಹಲವಾರು ಕಟ್ಟಡಗಳಿಗೆ ಹಾನಿಯಾಗಿದೆ. ಎರಡು ಅಂತಸ್ತಿನ ಮನೆಯೊಳಗೆ ಅಕ್ರಮವಾಗಿ ಪಟಾಕಿ ಕಾರ್ಖಾನೆ ನಡೆಸಲಾಗುತ್ತಿತ್ತು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ವರ್ಷ ಮೇ ತಿಂಗಳಲ್ಲಿ ಮಿಡ್ನಾಪುರ ಜಿಲ್ಲೆಯ ಎಗ್ರಾ ಎಂಬಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದರು. ಅಲ್ಲದೇ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಮತ್ತೊಂದು ಪ್ರಕರಣದಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಮೂರು ಜನರು ಸಾವನ್ನಪ್ಪಿದ್ದರು.