ಬುದ್ಧಿಮಾಂದ್ಯ ಅಪ್ರಾಪ್ತೆಯ ಮೇಲೆ 72ರ ವೃದ್ಧನ ಕೀಚಕತನ

ಶುಕ್ರವಾರ, 24 ಅಕ್ಟೋಬರ್ 2014 (10:50 IST)
ಬುದ್ಧಿಮಾಂದ್ಯ ಅಪ್ರಾಪ್ತ ಬಾಲಕಿಯ ಮೇಲೆ 72 ವರ್ಷದ ವೃದ್ಧನೊಬ್ಬ ಲೈಂಗಿಕ ಶೋಷಣೆ ನಡೆಸಿದ ಘಟನೆ ಒಡಿಶಾದಲ್ಲಿ ವರದಿಯಾಗಿದೆ. ಆರೋಪಿ ಬಾಲಕಿಯ ಸಂಬಂಧಿಕನಾಗಿದ್ದು ಘಟನೆ ಬೆಳಕಿಗೆ ಬಂದ ನಂತರ ನಾಪತ್ತೆಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 

ಪೀಡಿತ ಬಾಲಕಿಯ ತಾಯಿ ನೀಡಿದ ದೂರಿನ ಅನ್ವಯ ಸಪ್ಟೆಂಬರ್ 28 ರಂದು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆತ ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಪರಿಣಾಮ ಭೀಕರವಾಗಿರುತ್ತದೆ ಎಂದು ಬೆದರಿಕೆ ಕೂಡ ಹಾಕಿದ್ದ .
 
ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ ಆರೋಪಿಯ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಕರ್ಮಾಡಾ ಪೊಲೀಸ್ ಠಾಣಾಧಿಕಾರಿ ಬ್ರಹ್ಮಾನಂದ ನಾಯಕ ತಿಳಿಸಿದ್ದಾರೆ. 
 
ಪ್ರಕರಣ ದಾಖಲಾಗಿದ್ದ ದಿನದಿಂದ ಆರೋಪಿ ಪರಾರಿಯಾಗಿದ್ದಾನೆ. ತನಿಖೆ ಪ್ರಗತಿಯಲ್ಲಿದೆ ಎಂದು ನಾಯಕ್ ಮಾಹಿತಿ ನೀಡಿದ್ದಾರೆ. 

ವೆಬ್ದುನಿಯಾವನ್ನು ಓದಿ