75 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ : ಅಂಬಾನಿ

ಸೋಮವಾರ, 13 ಫೆಬ್ರವರಿ 2023 (16:23 IST)
ಲಕ್ನೋ : ಉತ್ತರ ಪ್ರದೇಶದಲ್ಲಿ 75 ಸಾವಿರ ಕೋಟಿ ರೂ. ಹೂಡಿಕೆ ಮಾಡುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಘೋಷಿಸಿದ್ದಾರೆ.

ದೂರಸಂಪರ್ಕ ಕ್ಷೇತ್ರದಲ್ಲಿ 5ಜಿ ಸೇವೆಯನ್ನು ಉನ್ನತೀಕರಿಸುವ ವಿಷಯವೂ ಸೇರಿದಂತೆ, ಚಿಲ್ಲರೆ ವಹಿವಾಟು ಹಾಗೂ ಇಂಧನದ ಉತ್ಪಾದನ ಕ್ಷೇತ್ರದ ಮೇಲೆ ಮುಂದಿನ ನಾಲ್ಕು ವರ್ಷಗಳಲ್ಲಿ 75000 ಕೋಟಿ ರೂ.ಗಳನ್ನು ಹೂಡಿಕೆ ಮಾಡಲಾಗುವುದು. ಇದರಿಂದ 1 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ತಿಳಿಸಿದರು.

ಉತ್ತರ ಪ್ರದೇಶ ಆಯೋಜಿಸಿದ ಜಾಗತಿಕ ಹೂಡಿಕೆದಾರರ ಸಭೆಯಲ್ಲಿ ಮಾತನಾಡಿದ ಅವರು ಈ ವರ್ಷದ ಕೊನೆಯೊಳಗೆ 5ಜಿ ಸೇವೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದರು.

ಜಿಯೋ ಸೇವೆಯ ಉನ್ನತೀಕರಣದಿಂದ ವ್ಯವಹಾರ ಹಾಗೂ ಕೈಗಾರಿಕೆ, ಕೃಷಿ, ಸಾಮಾಜಿಕ ಮತ್ತು ಸರ್ಕಾರಿ ಕ್ಷೇತ್ರಗಳಲ್ಲಿ ಅನುಕೂಲವಾಗಲಿದೆ. 5ಜಿ ಸೇವೆಯನ್ನು ದೇಶದ ಉದ್ದಗಲಕ್ಕೂ ವಿಸ್ತರಿಸುವ ಕುರಿತು ಸರ್ಕಾರದೊಂದಿಗೆ ಚರ್ಚಿಸಲಿದ್ದೇವೆ ಎಂದು ಹೇಳಿದರು. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ