8ನೇ ಬಾರಿ ಬಜೆಟ್ ಮಂಡನೆ ಮಾಡುತ್ತಿರುವ ಚಿದಂಬರಂ

ಗುರುವಾರ, 28 ಫೆಬ್ರವರಿ 2013 (12:10 IST)
PTI
PTI
8ನೇ ಬಾರಿ ಬಜೆಟ್ ಮಂಡಿಸುತ್ತಿರುವ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಅವರು, ಆರ್ಥಿಕ ಬೆಳವಣಿಗೆಯನ್ನು ಸುಸ್ಥಿರವಾಗಿಸುವುದೇ ಯುಪಿಎ ಸರ್ಕಾರದ ಮೂಲ ಮಂತ್ರ ಎಂದು ಹೇಳಿದ್ದಾರೆ.

ಇಂದು ಲೋಕಸಭೆಯಲ್ಲಿ 2013-14ನೇ ಸಾಲಿನ ಸಾಮಾನ್ಯ ಬಜೆಟ್ ಮಂಡಿಸುತ್ತಿರುವ ಚಿದಂಬರಂ, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಯುಪಿಎ ಒತ್ತು ನೀಡಿದೆ. ಆರ್ಥಿಕತೆಯ ಬಗ್ಗೆ ಆತಂಕ ಪಡುವ ಅಗತ್ಯ ಇಲ್ಲ. ತೈಲ ಹಾಗೂ ಚಿನ್ನದ ಮಾರುಕಟ್ಟೆಯಲ್ಲಿನ ಏರಿಳಿತದಿಂದ ಹಣದುಬ್ಬರದಲ್ಲಿ ವ್ಯತ್ಯಾಸವಾಗಿದೆ. ಆದರೂ ಹಣದುಬ್ಬರವನ್ನು ನಿಯಂತ್ರಿಸುವಲ್ಲಿ ನಾವು ಸಫಲರಾಗಿದ್ದೇವೆ ಎಂದು ಹೇಳಿದರು.

ಜಾಗತಿಕ ಆರ್ಥಿಕ ಅಭಿವೃದ್ಧಿ ದರ ಶೇ.3.91ರಿಂದ ಶೇ.3.21ಕ್ಕೆ ಇಳಿಕೆಯಾಗಿದೆ. ಚೀನಾ ಮತ್ತು ಇಂಡೋನೇಷಿಯಾ ಹೆಚ್ಚಿನ ಆರ್ಥಿಕ ಪ್ರಗತಿ ಹೊಂದುತ್ತಿವೆ. ಈಗ ಭಾರತವೂ ಅದೇ ಹಾದಿಯಲ್ಲಿ ಸಾಗುತ್ತಿದೆ ಎಂದು ಅವರು ಹೇಳಿದರು.

11ನೇ ಹಣಕಾಸು ಯೋಜನೆಯಲ್ಲಿ ಶೇ.8ರಷ್ಟು ಆರ್ಥಿಕ ಅಭಿವೃದ್ಧಿ ಸಾಧಿಸಲಾಗಿದೆ ಎಂದು ಚಿದಂಬರಂ ಲೋಕಸಭೆಗೆ ತಿಳಿಸಿದರು.

ವೆಬ್ದುನಿಯಾವನ್ನು ಓದಿ