ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ಪಟಾಕಿಗಳನ್ನು ಸಂಗ್ರಹಿಸಿಡಲಾಗಿತ್ತು. ಅಲ್ಲದೆ, ಅಲ್ಲಿಯೇ ಪಕ್ಕದಲ್ಲಿ ಪಟಾಕಿಗಳನ್ನು ಉತ್ಪನ್ನ ಮಾಡಲಾಗುತ್ತಿತ್ತು. ಹೀಗೆ ಉತ್ಪನ್ನ ಮಾಡಲಾದ ಪಟಾಕಿಗಳನ್ನು ಅಂಗಡಿಗೆ ಸಾಗಿಸುವ ಸಂದರ್ಭದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಈ ಬೆಂಕಿಗೆ ಪಟಾಕಿ ಅಂಗಡಿ ಧಗಧಗನೆ ಉರಿದು, ಸಂಗ್ರಹಿಸಿಟ್ಟಿದ್ದ ಎಲ್ಲ ಪಟಾಕಿಗಳು ಒಮ್ಮೆಲೆ ಸ್ಫೋಟಗೊಂಡಿವೆ. ಈ ಬೆಂಕಿ ಜ್ವಾಲೆಗೆ ಪಕ್ಕದಲ್ಲಿರುವ ಎರಡು ಅಂಗಡಿಗಳು ಸಹ ಆಗುತಿಯಾಗುವೆ. ಪರಿಣಾಮ ಅಂಗಡಿಯ ಸಿಬ್ಬಂದಿ ಹಾಗೂ ಗ್ರಾಹಕರು ಸೇರಿ ಎಂಟು ಮಂದಿ ಮೃತಪಟ್ಟಿದ್ದಾರೆ. ಐವರು ತೀವ್ರ ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.