ತಮಿಳುನಾಡು, ಕೇರಳ, ಗುಜರಾತ್, ರಾಜಸ್ಥಾನ, ಪಂಜಾಬ್, ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್‌ಗಢ, ಜಾರ್ಖಂಡ್, ಪಶ್ಚಿಮ ಬಂಗಾಳ, ಮಣಿಪುರ ಮತ್ತು ಅಸ್ಸಾಂನ 40,000 ವಯಸ್ಕರು ಮತ್ತು 1,200 ಹದಿಹರೆಯದವರನ್ನು ಈ ಸಮೀಕ್ಷೆಯಲ್ಲಿ ಬಳಸಲಾಗಿತ್ತು.
ಅತಿ ಹೆಚ್ಚು ಮಾನಸಿಕ ಅನಾರೋಗ್ಯ ಪೀಡಿತವಾದ ರಾಜ್ಯಗಳಲ್ಲಿ ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಮಣಿಪುರ, ಅಸ್ಸಾಂ ಮುಂಚೂಣಿಯಲ್ಲಿವೆ. ಕರ್ನಾಟಕದ ಜನಸಂಖ್ಯೆಯ ಸುಮಾರು 8% ಮಾನಸಿಕ ಕಾಯಿಲೆ ಬಳಲುತ್ತಿದ್ದಾರೆ ಎಂದು ಸಮೀಕ್ಷೆ ಹೇಳಿದೆ. ಅದರಲ್ಲಿ 7.3% ಜನರು 13-17 ವರ್ಷ ವಯಸ್ಸಿನ ಒಳಗಿನವರಾಗಿದ್ದು ಅವರಿಗೆ ಚಿಕಿತ್ಸೆಯ ಅವಶ್ಯಕತೆ ಇದೆ ಎಂದು ತಿಳಿದು ಬಂದಿದೆ.