ಶಬರಿಮಲೆಯಿಂದ ಹಿಂದಿರುಗುತ್ತಿದ್ದ 8 ಯಾತ್ರಿಕರು ಸಾವು!

ಶನಿವಾರ, 24 ಡಿಸೆಂಬರ್ 2022 (14:04 IST)
ಚೆನ್ನೈ : ರಸ್ತೆ ಅಪಘಾತದಲ್ಲಿ ಶಬರಿಮಲೆಯಿಂದ ಹಿಂದಿರುಗುತ್ತಿದ್ದ 8 ಮಂದಿ ಸಾವನ್ನಪ್ಪಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ತಮಿಳುನಾಡಿನ ತೇಣಿ ಜಿಲ್ಲೆಯ ಕುಮುಲಿ ಮೌಂಟೇನ್ ಪಾಸ್ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಪರಿಣಾಮ ಕಾರು 40 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ಈ ವೇಳೆ ಕಾರಿನಲ್ಲಿದ್ದ 8 ಭಕ್ತರು ಸಾವನ್ನಪ್ಪಿದ್ದಾರೆ. ಇನ್ನುಳಿದ ಮಗು ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಘಟನೆಗೆ ಸಂಬಂಧಿಸಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಕಾರಿನಲ್ಲಿದ್ದ ಇಬ್ಬರನ್ನು ರಕ್ಷಿಸಿ ತಕ್ಷಣ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತಪಟ್ಟ ಎಲ್ಲಾ ಪ್ರಯಾಣಿಕರು ಥೇಣು ಆಂಡಿಪೆಟ್ಟಿಯ ಮೂಲದವರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ