ದೇಶದಲ್ಲಿ 3 ಪಟ್ಟು ಕೊರೊನಾ ಹೆಚ್ಚಳ: 8582 ಪಾಸಿಟಿವ್ ಪತ್ತೆ

ಭಾನುವಾರ, 12 ಜೂನ್ 2022 (14:48 IST)

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 8,582 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 4 ಮಂದಿ ಸೋಂಕಿಗೆ ಬಲಿಯಾಗಿದ್ದ ಕಳೆದ 3 ದಿನದಲ್ಲಿ ಮೂರು ಪಟ್ಟು ಸೋಂಕು ಪ್ರಮಾಣದಲ್ಲಿ ಹೆಚ್ಚಳ ಕಂಡು ಬಂದಿದೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,32,22,017ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,761ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 44,513ಕ್ಕೆ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 4,435 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,26,52,743ಕ್ಕೆ ತಲುಪಿದೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,44,994 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಇದರೊಂದಿಗೆ ಈ ವರೆಗೂ 85,45,43,282 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,95,07,08,541 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ