ಬೀಫ್ ಫೆಸ್ಟ್ ಆಯೋಜಿಸಿದ್ದ ಐಐಟಿ ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣ: 9 ಜನರ ವಿರುದ್ಧ ಪ್ರಕರಣ ದಾಖಲು

ಬುಧವಾರ, 31 ಮೇ 2017 (10:40 IST)
ಚೆನ್ನೈ: ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಆದೇಶ ವಿರೋಧಿಸಿ ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿ)ಯ ಕ್ಯಾಂಪಸ್ ನಲ್ಲಿ ಬೀಫ್ ಫೆಸ್ಟ್ ಆಯೋಜಿಸಿದ್ದ ಪಿಎಚ್ ಡಿ ವಿದ್ಯಾರ್ಥಿ ಆರ್ ಸೂರಜ್ ಮೇಲೆ ಗೋರಕ್ಷಕರು ಗಂಭೀರ ಹಲ್ಲೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 9 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
 
ಕೇಂದ್ರ ಸರ್ಕಾರದ ಆದೇಶವನ್ನು
ವಿರೋಧಿಸಿ ನಿನ್ನೆ ಮದ್ರಾಸ್ ಐಐಟಿ ಕ್ಯಾಂಪಸ್ ನಲ್ಲಿ ಬೀಫ್ ಫೆಸ್ಟ್ ಆಯೋಜಿಸಲಾಗಿತ್ತು. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಗೋರಕ್ಷಕರು ಐಐಟಿ ವಿದ್ಯಾರ್ಥಿ ಆರ್. ಸೂರಜ್ ಮೇಲೆ ಗಂಭೀರ ಹಲ್ಲೆ ನಡೆಸಿದ್ದರು. ವಿದ್ಯಾರ್ಥಿಯ ಬಲಗಣ್ಣಿಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 
 
ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ಪೊಲೀಸರು ಇದೀಗ 9 ಜನರ ವಿರುದ್ಧ ಐಪಿಸಿ ಸೆಕ್ಷನ್ 324, 341ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 
 

ವೆಬ್ದುನಿಯಾವನ್ನು ಓದಿ