ನಿರ್ಮಾಣ ಹಂತದ ಕಟ್ಟಡ ಕುಸಿದು 9 ಸಾವು
ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕಟ್ಟಡ ಕುಸಿತಗೊಂಡಿರಬಹುದೆಂದು ಶಂಕಿಸಲಾಗಿದ್ದು ಕಟ್ಟಡದ ಒಳಗೆ ಮತ್ತಷ್ಟು ಜನರು ಸಿಕ್ಕಿ ಹಾಕಿಕೊಂಡಿರುವ ಶಂಕೆ ಇದೆ.
ಬಹುಮಹಡಿ ಕಟ್ಟಡದ 14ನೇ ಅಂತಸ್ತಿನ ಕಾಮಗಾರಿ ನಡೆಯುತ್ತಿದ್ದು ಅದರಡಿ ಸಿಲುಕಿದ ಕಾರ್ಮಿಕರು ದುರಂತವಾಗಿ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿರುವ ಪುಣೆಯ ಮೇಯರ್ ಪ್ರಶಾಂತ್ ಜಗಪತ್ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.