ಠಾಣೆಯಲ್ಲಿ ನಾಲ್ಕಂತಸ್ತಿನ ಕಟ್ಟಡ ಕುಸಿದು 9 ಮಂದಿ ಸಾವು

ಬುಧವಾರ, 29 ಜುಲೈ 2015 (15:01 IST)
ಕಳೆದ 35 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ನಾಲ್ಕಂತಸ್ತಿನ ಕಟ್ಟಡವೊಂದು ಕುಸಿದಿದ್ದರಿಂದ 9 ಮಂದಿ ಸಾವನ್ನಪ್ಪಿದ್ದು ಹಲವಾರು ಮಂದಿಗೆ ಗಾಯಗಳಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಠಾಣೆ ಜಿಲ್ಲೆಯ ಥಾಕುರ್ಲಿ ಪ್ರದೇಶದ ಚೋಳ್ವೆ ಗ್ರಾಮದಲ್ಲಿ ನಿನ್ನೆ ರಾತ್ರಿ ನಾಲ್ಕಂತಸ್ತಿನ ಕಟ್ಟಡ ಕುಸಿದ ಹಿನ್ನೆಲೆಯಲ್ಲಿ ಅನೇಕ ಕುಟುಂಬಗಳು ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ. ಎನ್‌ಡಿಆರ್‌ಎಫ್ ಅಧಿಕಾರಿಗಳು, ನಗರಸಭೆ ಅಧಿಕಾರಿಗಳು ಪರಿಹಾರ ಕಾರ್ಯ ಆರಂಭಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 
ಆದರೆ, ನಿರಂತರವಾಗಿ ಸುರಿಯುತ್ತಿರುವ ಮಳೆ ಪರಿಹಾರ ಕಾರ್ಯಗಳಿಗೆ ಅಡ್ಡಿಯಾಗಿದೆ. ಸುಮಾರು 20 ಕುಟುಂಬಗಳು ಕಟ್ಟಡದೊಳಗೆ ಸಿಲುಕಿರುವ ಸಾಧ್ಯತೆಗಳಿವೆ ಎಂದು ಜೈದೀಪ್ ವಿಸಾವೆ ತಿಳಿಸಿದ್ದಾರೆ.
 
ಮೃತರಾದವರಲ್ಲಿ ಪಿ.ವಿ.ಈಶ್ವರನ್(67) ಉಷಾ ಕಿರಣ್(49) ಪ್ರತೀಕ್ ಹಜಿರಿಯಾ(7) ಉಷಾ ಸುಂದರಂ ಮತ್ತು ಫ್ರಾನ್ಸಿಸ್ ನಡಾರ್ ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ.
 
ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಡೊಂಬಿವಿಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾಧಿಕಾರಿ ಅಶ್ವಿನಿ ಜೋಷಿ ಪರಿಹಾರ ಕಾರ್ಯಾಚರಣೆ ಪರಿಶೀಲನೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  
 

ವೆಬ್ದುನಿಯಾವನ್ನು ಓದಿ