ಮಹಿಳೆ ಮೇಲೆ ಅತ್ಯಾಚಾರ ಮಾಡಿ, ಸಾಯಿಸಿದ 16ರ ಬಾಲಕ!
ಹನುಮಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಕೈಲಾಸಪುರಿ ಗ್ರಾಮದಲ್ಲಿ ಜನವರಿ 30ರಂದು ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. 2 ವರ್ಷಗಳ ಹಿಂದೆ ಬಾಲಕ ಮೊಬೈಲ್ ಕಳ್ಳತನ ಮಾಡಿದ್ದಾಗಿ ಆರೋಪಿಸಲಾಗಿತ್ತು. ಇದರ ದ್ವೇಷಕ್ಕೆ ಆತ ಈ ಭೀಕರ ಕೃತ್ಯ ಎಸಗಿದ್ದಾನೆ ಎಂದು ಶಂಕಿಸಲಾಗಿದೆ.
ವರದಿಗಳ ಪ್ರಕಾರ ಬಾಲಕ ಮಹಿಳೆಯ ಬಾಯಿಗೆ ಪ್ಲಾಸ್ಟಿಕ್ ಚೀಲ ಹಾಗೂ ಬಟ್ಟೆಯನ್ನು ತುರುಕಿ, ಆಕೆ ವಾಸವಿದ್ದ ನಿರ್ಮಾಣ ಹಂತದ ಕಟ್ಟಡದೆಡೆಗೆ ಎಳೆದೊಯ್ದು, ಆಕೆಯ ತಲೆ ಹಾಗೂ ದೇಹದ ಇತರ ಭಾಗಗಳಿಗೆ ದೊಣ್ಣೆಯಿಂದ ಹೊಡೆದಿದ್ದಾನೆ. ಮಾತ್ರವಲ್ಲದೇ ಆಕೆಯ ಖಾಸಗಿ ಭಾಗಗಳಿಗೆ ಗಾಯಗೊಳಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.