ನಿದ್ರೆ ಬರುತ್ತಿಲ್ಲ ಎಂದು 19ರ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ!
ಬೋಲಂಗಿರ್ ಜಿಲ್ಲೆಯ ವಿದ್ಯಾರ್ಥಿನಿ ನಿನ್ನೆ ತಡರಾತ್ರಿ ಜಮುಕೋಲಿಯಲ್ಲಿರುವ ಖಾಸಗಿ ಹಾಸ್ಟೆಲ್ನಲ್ಲಿ ತನ್ನ ಕೋಣೆಯ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮೃತದೇಹವನ್ನು ಹೊರತೆಗೆಯಲಾಗಿದೆ.
ಆತ್ಮಹತ್ಯೆ ಬಳಿಕ ವಿದ್ಯಾರ್ಥಿ ಕೋಣೆಯಲ್ಲಿ ಡೆತ್ನೋಟ್ ಪತ್ತೆಯಾಗಿದ್ದು, ಕೆಲ ದಿನಗಳಿಂದ ಸರಿಯಾಗಿ ನಿದ್ರೆ ಬಾರದ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪತ್ರದಲ್ಲಿ ಬರೆದಿದ್ದಾಳೆ.
ಅಲ್ಲದೇ ತನ್ನ ಸಾವಿಗೆ ಯಾರೂ ಕಾರಣರಲ್ಲ. ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕಾಗಿ ಕುಟುಂಬದವರಲ್ಲಿ ಕ್ಷಮೆಯಾಚಿಸುತ್ತೇನೆ ಎಂಬುದಾಗಿ ಬರೆದಿದ್ದಾಳೆ.