ಸುಪ್ರೀಂ ಆದೇಶದಿಂದ ಆಪ್‌ಗೆ ಬಿಗ್‌ ವಿಕ್ಟರಿ

ಗುರುವಾರ, 11 ಮೇ 2023 (14:23 IST)
ನವದೆಹಲಿ : ಕಾನೂನು ಸುವ್ಯವಸ್ಥೆ ಮತ್ತು ಪೊಲೀಸ್ ಹೊರತುಪಡಿಸಿ ಭಾರತೀಯ ಆಡಳಿತಾತ್ಮಕ ಸೇವೆಗಳು ಮತ್ತು ರಾಜಧಾನಿಯಲ್ಲಿನ ಎಲ್ಲಾ ಸೇವೆಗಳ ಮೇಲೆ ದೆಹಲಿ ಸರ್ಕಾರ ತನ್ನ ನಿಯಂತ್ರಣವನ್ನು ಹೊಂದಿರುತ್ತದೆ ಎಂದು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ ಮಹತ್ವದ ತೀರ್ಪು ನೀಡಿದೆ.
 
ಲೆಫ್ಟಿನೆಂಟ್ ಗವರ್ನರ್ ಮತ್ತು ದೆಹಲಿ ಸರ್ಕಾರದ ನಡುವೆ ನಡೆಯುತ್ತಿದ್ದ ಆಡಳಿತಾತ್ಮಕ ಸಂಘರ್ಷಕ್ಕೆ ಸಂಬಂಧಿಸಿದಂತೆ ಆಮ್ ಅದ್ಮಿ ಪಕ್ಷ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠ ಇಂದು ಪೂರ್ಣ ಪ್ರಮಾಣ ನಿಯಂತ್ರಣ ಕೇಂದ್ರ ಸರ್ಕಾರಕ್ಕೆ ನೀಡಲು ನಿರಾಕರಿಸಿದೆ.

ಚುನಾಯಿತ ಸರ್ಕಾರವು ತನ್ನ ಅಧಿಕಾರಿಗಳ ಮೇಲೆ ನಿಯಂತ್ರಣವನ್ನು ಹೊಂದಿರುತ್ತದೆ. ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರವು ತನ್ನ ಅಧಿಕಾರಿಗಳನ್ನು ನಿಯಂತ್ರಿಸಲು ಅನುಮತಿಸದಿದ್ದರೆ ಶಾಸಕಾಂಗ ಮತ್ತು ಸಾರ್ವಜನಿಕರ ಕಡೆಗೆ ಅದರ ಜವಾಬ್ದಾರಿಯನ್ನು ದುರ್ಬಲಗೊಳಿಸಿದಂತಾಗುತ್ತದೆ ಎಂದು ಕೋರ್ಟ್ ತಿಳಿಸಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ