ಪೊಲೀಸ್ ವಾಹನದಲ್ಲಿ ಬಾಂಬ್ ಪತ್ತೆ!
ಅಮೃತಸರದ ರಂಜಿತ್ ಅವೆನ್ಯೂ ಪ್ರದೇಶದಲ್ಲಿರುವ ಸಬ್ ಇನ್ಸ್ಪೆಕ್ಟರ್ ದಿಲ್ಬಾಗ್ ಸಿಂಗ್ ಅವರ ನಿವಾಸದ ಬಳಿ ಬಾಂಬ್ ಮಾದರಿಯ ವಸ್ತು ಪತ್ತೆ ಆಗಿದೆ.
ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡು ಸಿಸಿಟಿವಿ ದೃಶ್ಯವನ್ನು ಪರಿಶೀಲಿಸಿದ ಪೊಲೀಸರಿಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಬೈಕ್ನಲ್ಲಿ ಬಂದು ಪೊಲೀಸ್ ಕಾರಿನ ಕೆಳಗೆ ಈ ಅನುಮಾನಸ್ಪದ ವಸ್ತುವನ್ನು ಇಟ್ಟು ಹೋಗಿರುವುದು ಕಂಡು ಬಂದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ ಈ ವಸ್ತು ಬಾಂಬ್ ಎಂದು ತಿಳಿಸಿದ್ದಾರೆ. ಇನ್ಸ್ಪೆಕ್ಟರ್ ಜನರಲ್ ಸುಖ್ ಚಾನ್ ಸಿಂಗ್ ಗೋಲ್ ಅವರು, ಈ ವಸ್ತುವು ಡಿಟೋನೇಟರ್ ಆಗಿರಬಹುದು ಎಂದು ಹೇಳಿದ್ದಾರೆ.